ಇಂದು (ಜನವರಿ 8) ರಾಕಿಂಗ್ ಸ್ಟಾರ್ ಯಶ್ ಅವರಿಗೆ ಜನುಮದಿನದ ಸಂಭ್ರಮ. 39ನೇ ವರ್ಷಕ್ಕೆ ಕಾಲಿಡುತ್ತಿರುವ ಯಶ್ ಕುಟುಂಬಸ್ಥರ ಜೊತೆ ಸಿಂಪಲ್ ಆಗಿ ಬರ್ತಡೇ ಸೆಲೆಬ್ರೇಟ್ ಮಾಡಲಿದ್ದಾರೆ. ಯಶ್ ಬರ್ತಡೇ ಹಿನ್ನೆಲೆಯಲ್ಲಿ ಅಭಿಮಾನಿಗಳು ಕಾಮನ್ ಡಿಪಿ ಹಾಕಿಕೊಳ್ಳುತ್ತಿದ್ದಾರೆ.
ಯಶ್ ಹುಟ್ಟುಹಬ್ಬದಂದೇ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಇಂದು ಬೆಳಿಗ್ಗೆ 10:25ಕ್ಕೆ ಟೀಸರ್ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ಟೀಸರ್‌ಗಾಗಿ ಕಾತುರದಿಂದ ಕಾಯುತ್ತಿದ್ದಾರೆ.
ಅದ್ದೂರಿ ಬರ್ತಡೇ ಸೆಲೆಬ್ರೇಷನ್ ಗೆ ಯಶ್ ಬ್ರೇಕ್ ಹಾಕಿದ್ದಾರೆ. ಹಾಗಾಗಿ ಕಳೆದ ಕೆಲ ದಿನಗಳ ಹಿಂದೆಯೇ ಸೋಷಿಯಲ್ ಮೀಡಿಯಾ ಮೂಲಕ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂದು ಮನವಿ ಮಾಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ 1986 ಜನವರಿ 8ರಂದು ಹಾಸನ ಜಿಲ್ಲೆಯ ಭುವನಹಳ್ಳಿಯಲ್ಲಿ ಜನಿಸಿದರು. ಅವರ ಮೊದಲ ಹೆಸರು ನವೀನ್ ಕುಮಾರ್ ಗೌಡ. ಅಭಿನಯ ಹಾಗೂ ನಾಟಕದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಅವರು ಮೊದಲು ಧಾರವಾಹಿಗಳಲ್ಲಿ ಗುರುತಿಸಿಕೊಂಡು ನಂತರ ಕನ್ನಡ ಚಿತ್ರರಂಗದಲ್ಲಿ ಮಿಂಚಿದರು.