ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕುಟುಂಬ ಸಮೇತ ಸರ್ಪ ಸಂಸ್ಕಾರದಲ್ಲಿ ಭಾಗಿಯಾದ ನಟಿ ಕತ್ರಿನಾ ಕೈಫ್

0
Spread the love

ಮಂಗಳೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್‌ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ನಟಿ ಕತ್ರಿನಾ ಕೈಫ್ ದೇವಸ್ಥಾನದ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

Advertisement

ಕತ್ರಿನಾ ಕೈಫ್ ಅವರ ಕುಟುಂಬ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ನಾಗದೋಷ ಹಾಗೂ ಸಂಕಷ್ಟಗಳ ಪರಿಹಾರದ ಹಿನ್ನೆಲೆಯಲ್ಲಿ ಕತ್ರಿನಾ ಕೈಫ್ ಕುಟುಂಬ ಸಮೇತ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ.

ಇತ್ತೀಚೆಗೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳಕ್ಕೂ ಕತ್ರಿನಾ ಕೈಫ್ ಭೇಟಿ ನೀಡಿದ್ದರು. ಮಹಾ ಕುಂಭಮೇಳದಲ್ಲಿ ಭಾಗಿಯಾದ ಕತ್ರಿನಾ ಕೈಫ್ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು. ಈ ಬೆನ್ನಲ್ಲೇ ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here