‘ನಂದ ಲವ್ಸ್ ನಂದಿತಾ’ ಸಿನಿಮಾದಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದ ನಟಿ ನಂದಿತಾ ಶ್ವೇತಾ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಜಿಂಕೆ ಮರೀನಾ, ಜಿಂಕೆ ಮರೀನಾ..ಅಂತಾ ಕುಣಿದು ಫೇಮಸ್ ಆಗಿದ್ದ ನಂದಿತಾ ದಾಸ್ ಆ ಬಳಿಕ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದರು, ಇದೀಗ ಮತ್ತೆ ಕನ್ನಡ ಚಿತ್ರರಂಗಕ್ಕೆ ವಾಪಸ್ ಆಗಿದ್ದಾರೆ.
ನಂದಿತಾ ಶ್ವೇತಾ ಅವರಿಗೆ ಕನ್ನಡ ಚಿತ್ರರಂಗದ ಮೇಲೆ ಅಪಾರ ಗೌರವವಿದೆ. ಆದರೆ ಇದುವರೆಗೂ ಆಕೆಗೆ ಸರಿ ಹೊಂದುವ ಪಾತ್ರ ಸಿಗದ ಕಾರಣ ಕನ್ನಡ ಚಿತ್ರರಂಗದಿಂದ ದೂರವೇ ಉಳಿದಿದ್ದರು. ಇದೀಗ ಅಂಥದೊಂದು ಪಾತ್ರ ಸಿಕ್ಕಿದ್ದು ಇದೇ ಕಾರಣಕ್ಕೆ ಮತ್ತೆ ಸ್ಯಾಂಡಲ್ ವುಡ್ ಗೆ ಬಂದಿದ್ದಾರೆ.
‘ಹೊಂದಿಸಿ ಬರೆಯಿರಿ’ ಸಿನಿಮಾದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ‘ಬೆನ್ನಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ‘ಪೆಪೆ’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀಲೇಶ್ ಎಸ್ ನಾಯರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯ ಈ ಚಿತ್ರದ ಫಸ್ಟ್ ಪೋಸ್ಟರ್ ರಿವೀಲ್ ಆಗಿದೆ. ಈ ಸಿನಿಮಾದ ಫಸ್ಟ್ ಲುಕ್ ಟೀಸರ್ಗೆ ಕಿಚ್ಚ ಸುದೀಪ್ ಅವರು ಖಡಕ್ ವಾಯ್ಸ್ ಕೊಟ್ಟಿದ್ದು, ರಕ್ತಸಿಕ್ತ ಅವತಾರದಲ್ಲಿ ನಂದಿತಾ ಶ್ವೇತಾ ಕಾಣಿಸಿಕೊಂಡಿದ್ದಾರೆ.
‘ಬೆನ್ನಿ’ ಚಿತ್ರದಲ್ಲಿ ದಕ್ಷಿಣದ ಭಾರತದ ಪ್ರಮುಖ ನಟರು ಅಭಿನಯಿಸಲಿದ್ದಾರೆ. ಕನ್ನಡ ಮಾತ್ರವಲ್ಲ ತೆಲುಗು, ತಮಿಳು ಹಾಗೂ ಮಲಯಾಳಂ ಈ ಚಿತ್ರ ಮೂಡಿ ಬರುತ್ತಿದೆ.