HomeEntertainmentನಟಿ ರಚಿತಾ ರಾಮ್ ಗೆ ಅಭಿಮಾನಿಯಿಂದ ಕಿರಿಕಿರಿ! ಸೆಲ್ಫಿ ನೆಪದಲ್ಲಿ ಹೆಗಲ ಮೇಲೆ ಕೈ ಹಾಕಿ...

ನಟಿ ರಚಿತಾ ರಾಮ್ ಗೆ ಅಭಿಮಾನಿಯಿಂದ ಕಿರಿಕಿರಿ! ಸೆಲ್ಫಿ ನೆಪದಲ್ಲಿ ಹೆಗಲ ಮೇಲೆ ಕೈ ಹಾಕಿ ಎಳೆದಾಡಿದ ಯುವಕ

For Dai;y Updates Join Our whatsapp Group

ತುಮಕೂರು: ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಯಾಂಡಲ್‌ವುಡ್ ನಟಿ ರಚಿತಾ ರಾಮ್ ಅವರಿಗೆ ಅಭಿಮಾನಿಯೊಬ್ಬ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಕಿರಿಕಿರಿ ಉಂಟುಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ರ‍್ಯಾಂಪ್ ವಾಕ್ ಮಾಡುತ್ತಿದ್ದ ನಟಿಯ ಹೆಗಲ ಮೇಲೆ ಕೈ ಹಾಕಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ವ್ಯಕ್ತಿ, ಅವರನ್ನು ಎಳೆದಾಡಿದ್ದಾನೆ. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಆತನನ್ನು ಹಿಡಿದಿದ್ದಾರೆ.

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಿನ್ನೆ ರಾತ್ರಿ ದಸರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟಿ ರಚಿತಾ ರಾಮ್ ಭಾಗವಹಿಸಿದ್ದು, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜಾ ಅವರೊಂದಿಗೆ ರ‍್ಯಾಂಪ್ ವಾಕ್ ಮಾಡುತ್ತಿದ್ದರು.

ಅಭಿಮಾನಿಗಳ ನಡುವೆ ನಿರ್ಮಿಸಲಾಗಿದ್ದ ರ‍್ಯಾಂಪ್ ವಾಕ್ ಟ್ರ್ಯಾಕ್‌ನಲ್ಲಿ ರಚಿತಾ ರಾಮ್ ಹೆಜ್ಜೆ ಹಾಕುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಏಕಾಏಕಿ ವೇದಿಕೆಗೆ ನುಗ್ಗಿದ್ದಾನೆ. ನಟಿಯ ಸಮೀಪ ತೆರಳಿ ಅವರ ಹೆಗಲ ಮೇಲೆ ಕೈ ಹಾಕಿ ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾನೆ.

ಈ ವೇಳೆ ಸೆಲ್ಫಿಗಾಗಿ ನಟಿಯನ್ನು ಎಳೆದಾಡಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಘಟನೆಯನ್ನು ಗಮನಿಸಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ವ್ಯಕ್ತಿಯನ್ನು ಹಿಡಿದು ನಟಿಯಿಂದ ದೂರಕ್ಕೆ ಕರೆದೊಯ್ದಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಲ್ಲಿ ನಟಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಉತ್ಸಾಹದಲ್ಲಿ ಅಭಿಮಾನಿ ಅತಿರೇಕದ ವರ್ತನೆ ತೋರಿರುವುದು ಚರ್ಚೆಗೆ ಕಾರಣವಾಗಿದೆ. ಪೊಲೀಸರ ಸಮಯೋಚಿತ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img