Actress Ramya: ಎಸ್.ಎಂ.ಕೃಷ್ಣ ಅಂತಿಮ ದರ್ಶನಕ್ಕೆ ಆಗಮಿಸಿದ ನಟಿ ರಮ್ಯಾ.!

0
Spread the love

ಬೆಂಗಳೂರು: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ,  ಹಿರಿಯ ರಾಜಕಾರಣಿ ಎಸ್‌.ಎಂ. ಕೃಷ್ಣ ಅವರು ಮಂಗಳವಾರ ಬೆಳಗ್ಗೆ 3:30ಕ್ಕೆ ವಿಧಿವಶರಾಗಿದ್ದಾರೆ. ಇನ್ನೂ ಎಸ್‌ಎಂ ಕೃಷ್ಣ ಪಾರ್ಥಿವ ಶರೀರಕ್ಕೆ  ನಟಿ ರಮ್ಯಾ ಅವರು ಸದಾಶಿವನಗರ ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈಗ ನಾನು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿ ತೆರಳಿದ್ದಾರೆ.

Advertisement

ಮಂಗಳವಾರ ನಸುಕಿನ ಜಾವ 2 ಗಂಟೆಗೆ ಕೃಷ್ಣ ಅವರ  ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರ ಮನೆಗೆ ಆಗಮಿಸಿದ್ದರು. ಬೆಳಗ್ಗೆ 3:30ಕ್ಕೆ ವೈದ್ಯರು ಎಸ್‌ಎಂ ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದರು. ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್‌ ಮಾಡಲಾಗುತ್ತದೆ.


Spread the love

LEAVE A REPLY

Please enter your comment!
Please enter your name here