ಬೆಂಗಳೂರು: ನಟಿ ರಮ್ಯಾ ಅವರು ದರ್ಶನ್ ಅಭಿಮಾನಿಗಳ ಬಗ್ಗೆ ಪೋಸ್ಟ್ ಮಾಡಿದಾಗಿನಿಂದ ಮೋಹಕತಾರೆ ರಮ್ಯಾಗೂ ಡಿಬಾಸ್ ಫ್ಯಾನ್ಸ್ಗೂ ಸೈಲೆಂಟ್ ವಾರ್ ಶುರುವಾಗಿದೆ. ರಮ್ಯಾ ಅವರಿಗೆ ಮೆಸೇಜ್ಗಳ ಮೂಲಕ ನಿಂದಿಸಲಾಗುತ್ತಿದ್ದು ನಟಿ ನಟನ ಅಭಿಮಾನಿಗಳ ವಿರುದ್ಧ ಕ್ರಮಕ್ಕೆ ರೆಡಿಯಾಗಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಟಿ ದೂರು ಕೊಟ್ಟರೆ, ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲದೇ ನಮ್ಮಲ್ಲಿ ಕೆಲವು ಪ್ರಕರಣದಲ್ಲಿ ಸ್ವಯಂಪ್ರೇರಿತ ತಗೋತಾರೆ. ಆಥರ ಏನಾದ್ರೂ ಅವಕಾಶ ಇದ್ರೆ ಪೊಲೀಸರು ಪರಿಶೀಲನೆ ಮಾಡ್ತಾರೆ ಅಂತಲೂ ಹೇಳಿದ್ದಾರೆ.
ಇನ್ನೂ ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇದರ ಸಂಪೂರ್ಣ ಮಾಹಿತಿ ಇನ್ನೂ ಬರಬೇಕು. ರಾಜಾರೋಷವಾಗಿ ಇಲ್ಲಿ ಡ್ರಗ್ಸ್ ತಯಾರಿಸ್ತಿದ್ರು ಅನ್ನೋದು ಆತಂಕದ ವಿಚಾರ.
ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚಿಸಲಾಗಿದೆ. ಸ್ಥಳೀಯ ಠಾಣೆಯವರಿಗೆ ಗೊತ್ತಾಗಿಲ್ಲ, ಬಾಂಬೆ ಪೊಲೀಸರು ಬಂದು ದಾಳಿ ಮಾಡ್ತಾರೆ ಅಂದ್ರೆ ನಮ್ಮದೇ ಲೋಪ ಎದ್ದು ಕಾಣ್ತದೆ. ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ, ಎಸ್ಪಿಗಳಿಗೂ ಸೂಚನೆ ಕೊಡಲಾಗಿದೆ ಎಂದು ತಿಳಿಸಿದ್ದಾರೆ.