ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಮಾನಿಗಳಿಗೆ ವಿಶೇಷ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಹಂಚಿಕೊಂಡಿದ್ದ ಪೋಸ್ಟ್ ಗೆ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದರು. ಈ ವೇಳೆ ಹಲವರು ರಮ್ಯಾ ಬೆಂಬಲಕ್ಕೆ ನಿಂತಿದ್ದರು. ಇದೀಗ ತಮಗೆ ಬೆಂಬಲ ನೀಡಿದವರಿಗೆ ರಮ್ಯಾ ಧನ್ಯವಾದ ಹೇಳಿದ್ದಾರೆ.
ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು, ನಾನು ಸದಾ ಚಿರಋಣಿ ಎಂದು ಬರೆದುಕೊಂಡಿರುವ ಅವರು ಈ ವಿಚಾರದಲ್ಲಿ ಬೆಂಬಲ ನೀಡಿದ ಕನ್ನಡಿಗರು ಹಾಗೂ ಅಭಿಮಾನಿಗಳ ಪೋಸ್ಟ್‌ನ ಸ್ಕ್ರೀನ್ ಶಾಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮುಂದುವರಿದು ದ್ವೇಷ ಮತ್ತು ಹತಾಶೆಯಿಂದ ತುಂಬಿರುವ ಜಗತ್ತಿನಲ್ಲಿ, ಪ್ರೀತಿ ಮತ್ತು ಕರುಣೆಯೇ ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡುತ್ತದೆ – ಆದ್ದರಿಂದ ನನಗೆ ಸ್ವಲ್ಪ ಪ್ರೀತಿಯನ್ನು ತೋರಿಸಲು ಸಮಯ ತೆಗೆದುಕೊಂಡಿದ್ದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಧನ್ಯವಾದಗಳು! ♥️ ಎಂದು ಪೋಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಹೈಕೋರ್ಟ್ ನಲ್ಲಿ ಜಾಮೀನು ಸಿಕ್ಕಿದ್ದು ಸದ್ಯ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಬಗ್ಗೆ ಪೋಸ್ಟ್ ಮಾಡಿದ್ದ ರಮ್ಯಾ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗಲಿದೆ ಎನ್ನುವ ಆಶಾಭಾವನೆ ಮೂಡಿದೆ. ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗಲಿದೆ ಎಂದು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಈ ಟ್ವೀಟ್‌ಗೆ ದರ್ಶನ್ ಅವರ ಅಭಿಮಾನಿಗಳು ಅಶ್ಲೀಲ ಕಮೆಂಟ್‌ಗಳನ್ನು ಮಾಡಿದ್ದರು.