ಕೊಪ್ಪಳ:- ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಕಾಮೆಂಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ಇತ್ತೀಚೆಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ಕೊಟ್ಟಿದ್ದರು.
ದೂರಿನ ಅನ್ವಯ ತನಿಖೆ ಕೈಗೊಂಡಿರುವ ಸೈಬರ್ ಕ್ರೈಂ ಪೊಲೀಸರು, ಹೀಗಾಗಲೇ ಹಲವರನ್ನು ಅರೆಸ್ಟ್ ಮಾಡಿ ತನಿಖೆ ನಡೆಸುತ್ತಿದ್ದಾರೆ. ಇದೀಗ ಮತ್ತೋರ್ವ ಕೊಪ್ಪಳ ಮೂಲದ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಂಜುನಾಥ ಬಂಧಿತ ಯುವಕ. ಇದಕ್ಕೂ ಮುನ್ನ ಸಿಸಿಬಿ ಪೊಲೀಸರು ಭುವನ್ ಗೌಡ, ಪವನ್, ಓಬಣ್ಣ ಮತ್ತು ಗಂಗಾಧರ್ ಎಂಬ ನಾಲ್ವರನ್ನು ಬಂಧಿಸಿದ್ದರು. ಇನ್ನೂ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆದ ನಟಿ ಅಶ್ಲೀಲ ಮೆಸೇಜ್ ಕಳುಹಿಸಿದ್ದವರ ಖಾತೆಗಳನ್ನು ಬಹಿರಂಗಗೊಳಿಸಿದ್ದರು. ಜೊತೆಗೆ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಿಡಿಗೇಡಿಗಳ ಪತ್ತೆಗಾಗಿ 6 ತಂಡವನ್ನ ರಚನೆ ಮಾಡಲಾಗಿತ್ತು.
ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಗೆ ನ್ಯಾಯ ಸಿಗುವ ಬಗ್ಗೆ ರಮ್ಯಾ ಪೋಸ್ಟ್ ಹಾಕಿದ್ದಕ್ಕೆ ಅಶ್ಲೀಲ ಕಾಮೆಂಟ್ ಮಾಡಿರುವುದು ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.