ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗನನ್ನು ಅರೆಸ್ಟ್ ಮಾಡಿದ್ದಾರೆ. ತರುಣ್ ರಾಜ್ ಬಂಧಿತ ಆರೋಪಿಯಾಗಿದ್ದು, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು.
Advertisement
ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಸ್ಮಗ್ಲಿಂಗ್ ಬಗ್ಗೆ ತರುಣ್ ರಾಜ್ ನ ಡಿಆರ್ ಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.