ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ರಹಸ್ಯ ಬಗೆದಷ್ಟು ಬಯಲಾಗುತ್ತಿದೆ. ತನಿಖೆ ವೇಳೆ ಒಂದೊಂದೇ ಸ್ಫೋಟಕ ಮಾಹಿತಿಗಳು ರಿವೀಲ್ ಆಗುತ್ತಿದೆ. ಈ ಗೋಲ್ಡ್ ಸ್ಮಗ್ಲಿಂಗ್ನಲ್ಲಿ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಎಂಬುವವರನ್ನು ಬಂಧಿಸಿದ್ದರು.
Advertisement
ಇದೀಗ ತರುಣ್ ರಾಜ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶಿಸಿದೆ.
ಈ ಪ್ರಕರಣದಲ್ಲಿ ತರುಣ್ ರಾಜ್‌ನನ್ನು ವಶಕ್ಕೆ ಪಡೆದಿದ್ದ ಡಿಆರ್‌ಐ ಅಧಿಕಾರಿಗಳು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ರನ್ಯಾ ರಾವ್ ಮೂಲಕ ತರುಣ್ ರಾಜ್ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣಿಕೆ ಮಾಡಿಸುತ್ತಿದ್ದ ಗಂಭೀರ ಆರೋಪ ಎದುರಿಸುತ್ತಿದ್ದಾರೆ.