ಸೌತ್ ನಟಿ ಸಮಂತಾ ರುತ್ ಪ್ರಭು ತಂದೆ ಜೋಸೆಫ್ ಪ್ರಭು ವಿಧಿವಶರಾಗಿದ್ದಾರೆ. ದುಃಖದ ಈ ವಿಚಾರವನ್ನು ಸ್ವತಃ ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ತಿಳಿಸಿದ್ದಾರೆ. ‘ಮತ್ತೆ ನಾವು ಸಿಗವವರೆಗೆ ಅಪ್ಪ..’ ಎಂದು ಸಮಂತಾ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದು ಒಡೆದ ಹೃದಯದ ಎಮೋಜಿ ಬಳಸಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳುತ್ತಿದ್ದ ಜೋಸೆಫ್ ಪ್ರಭು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನಟಿಯ ತಂದೆಯ ನಿಧನಕ್ಕೆ ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಸಮಂತಾ ತಂದೆ ಜೋಸೆಫ್ ಪ್ರಭು ತೆಲುಗು ಆಂಗ್ಲೋ ಇಂಡಿಯನ್ ಆಗಿದ್ದರು. ಸಮಂತಾ ಯಶಸ್ಸಿನಲ್ಲಿ ತಂದೆಯ ಕೊಡುಗೆ ಪ್ರಮುಖವಾಗಿತ್ತು. ವೃತ್ತಿಜೀವನದಲ್ಲಿ ಹಾಗೂ ವೈಯಕ್ತಿಕ ಬದುಕಿನ ಏಳು-ಬೀಳಿನಲ್ಲಿ ಸಮಂತಾಗೆ ಅವರ ತಂದೆ ಬೆಂಬಲವಾಗಿ ನಿಂತಿದ್ದರು. ತಂದೆಯನ್ನು ಕಳೆದುಕೊಂಡ ಸಮಂತಾ ಅವರಿಗೆ ಅಭಿಮಾನಿಗಳು, ಆಪ್ತರು ಮತ್ತು ಸೆಲೆಬ್ರಿಟಿಗಳು ಸಾಂತ್ವನ ಹೇಳಿದ್ದಾರೆ.
ಸಮಂತಾ ತಂದೆಯ ಬಗ್ಗೆ ಅನೇಕ ಸಂದರ್ಶನಗಳಲ್ಲಿ ಮಾತನಾಡಿದ್ದರು. ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ವಿಚ್ಛೇದನ ಪಡೆದಿದ್ದಾಗ ಜೋಸೆಫ್ ಪ್ರಭು ಅವರು ತುಂಬ ಬೇಸರ ಮಾಡಿಕೊಂಡಿದ್ದರು. ಆ ನೋವಿನಿಂದ ಹೊರಗೆ ಬರಲು ಅವರಿಗೆ ಬಹಳ ಸಮಯ ಹಿಡಿದಿತ್ತು.