ತುಮಕೂರು: ಹನಿಟ್ರ್ಯಾಪ್ʼನಂತಹ ಕೃತ್ಯಗಳು ಸಮಾಜದಲ್ಲಿ ಭಯ ಮತ್ತು ಅಪನಂಬಿಕೆಯನ್ನು ಹುಟ್ಟಿಸುತ್ತವೆ ಎಂದು ಗುಬ್ಬಿ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಹನಿಟ್ರ್ಯಾಪ್‌ನಂತಹ ಕೃತ್ಯಗಳು ಸಮಾಜದಲ್ಲಿ ಭಯ ಮತ್ತು ಅಪನಂಬಿಕೆಯನ್ನು ಹುಟ್ಟಿಸುತ್ತವೆ.
Advertisement
ಇಂತಹ ಘಟನೆಗಳನ್ನು ಖಂಡಿಸಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಒತ್ತಿ ಹೇಳಿದ್ದಾರೆ. ಇದರ ಜೊತೆಗೆ, ಅವರು ಕಾನೂನು ವ್ಯವಸ್ಥೆಯನ್ನು ಪ್ರಶ್ನಿಸದೆ, ಪೊಲೀಸ್ ಇಲಾಖೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
“ಪೊಲೀಸರು ಈ ರೀತಿಯ ಪ್ರಕರಣಗಳಲ್ಲಿ ತ್ವರಿತವಾಗಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಯಾರೇ ತಪ್ಪು ಮಾಡಿದರೂ ಕಾನೂನಿನ ಪ್ರಕಾರ ಶಿಕ್ಷೆ ಆಗಲಿ” ಎಂದು ಅವರು ಹೇಳಿದ್ದಾರೆ.