ವಿಜಯಸಾಕ್ಷಿ ಸುದ್ದಿ, ಗದಗ: ಶಾಲಾ ಶಿಕ್ಷಣ ಇಲಾಖೆ ಗದಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಗದಗ, ಗ್ರಾಮೀಣ ವಲಯ ಹಾಗೂ ಸರಕಾರಿ ಪ್ರೌಢಶಾಲೆ ಲಿಂಗಧಾಳ ಇವರ ಸಂಯುಕ್ತ ಆಶ್ರಯದಲ್ಲಿ ಅಡವಿಸೋಮಾಪುರ ವಲಯ ಮಟ್ಟದ 2025-26ನೇ ಸಾಲಿನ ಕ್ರೀಡಾಕೂಟ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆಯಿತು.
ಲಿಂಗದಾಳ ಗ್ರಾ.ಪಂ ಅಧ್ಯಕ್ಷ ಪ್ರದೀಪಕುಮಾರ ದೇ.ನವಲಗುಂದ ಕ್ರೀಡಾಕೂಟ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ ವಿ.ಗುಳೇದ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಖ್ಯ ಪಶುವೈದ್ಯಾಧಿಕಾರಿ ಡಾ. ಎಚ್.ಎ. ಜನಗಿ, ಸಮನ್ವಯ ಅಧಿಕಾರಿ ಜೆ.ಎ. ಭಾವಿಕಟ್ಟಿ, ಶಂಕರ ಹಡಗಲಿ, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ವ್ಹಿ. ಪಾಟೀಲ, ಕ.ರಾ.ಪ್ರೌ.ಶಾ.ಸ.ಶಿ. ಸಂಘದ ಜಿಲ್ಲಾಧ್ಯಕ್ಷ ಬಿ.ಎಫ್. ಪೂಜಾರ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಜು ಬಿ.ಚವ್ಹಾಣ, ರೋಟರಿ ಸೆಂಟ್ರಲ್‌ನ ಚೇತನ ಅಂಗಡಿ, ರವಿರಾಜ ಪವಾರ, ಮಹಾಂತೇಶ ಆರ್.ಪೂಜಾರ, ಮಹಾದೇವಪ್ಪ ದಾಟನಾಳ, ಸಿದ್ದಲಿಂಗಪ್ಪ ಚ.ಗುಳೇದ ಹಾಗೂ ದಾನಿಗಳು ಉಪಸ್ಥಿತರಿದ್ದರು.