ಧಾರವಾಡ: ಕೊರಿಯನ್ ಆನ್ ಲೈನ್ ಗೇಮ್ಗೆ ಅಡಿಕ್ಟ್ ಆಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್ ಪ್ರದೇಶದಲ್ಲಿ ನಡೆದಿದೆ.
ಮೃತ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಪೊಲೀಸರು ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ, ಅವನು ಕೊರಿಯನ್ ಗೇಮ್ಗಳಿಗೆ ಹೆಚ್ಚು ಸಮಯ ಮೀಸಲಿಟ್ಟಿದ್ದ ವಿಚಾರ ಬೆಳಕಿಗೆ ಬಂದಿದೆ.
ಪಿಯುಸಿ ಸೈನ್ಸ್ ಮುಗಿಸಿ ಮನೆಯಲ್ಲೇ ಇದ್ದ ವಿಕಾಸ್, ಯಾರಿಗೂ ತಿಳಿಯದಂತೆ ನಿರಂತರವಾಗಿ ಗೇಮ್ ಆಡುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆತ್ಮಹತ್ಯೆಗೆ ಮುನ್ನ “ನನ್ನ ಸಾವಿಗೆ ನಾನೇ ಕಾರಣ” ಎಂದು ಸ್ವತಃ ಮೆಸೇಜ್ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಧಾರವಾಡ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.



