ಬೆಂಗಳೂರು:- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ADGP ಚಂದ್ರಶೇಖರ್ ನಡುವಿನ ಆರೋಪ-ಪ್ರತ್ಯಾರೋಪ ಇನ್ನೂ ನಿಂತಿಲ್ಲ.
Advertisement
ಹಿಂದೆ ಕುಮಾರಸ್ವಾಮಿ ಅವರನ್ನು ಹಂದಿಗೆ ಹೋಲಿಸಿ ಮಾತನಾಡಿದ್ದ ADGP ಚಂದ್ರಶೇಖರ್ ಅವರು, ಇದೀಗ ಕುಮಾರಸ್ವಾಮಿ ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಹಾಗೂ ಕರ್ನಾಟಕ ಕೆಡರ್ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಚಂದ್ರಶೇಖರ್ ಅವರ ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ.
ದೂರಿನ ಅನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.