• About
  • Advertise
  • Privacy & Policy
  • Contact
Monday, October 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಸಚಿವ ಸೋಮಣ್ಣ ಮನವಿ ಮೇರೆಗೆ ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿ.ಕೆ. ಶಿವಕುಮಾರ್

Vijaya Sakshi by Vijaya Sakshi
June 26, 2025
in Karnataka News
0
ಕಾವೇರಿ ನದಿಗೆ ನಾವೆಲ್ಲ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ: ಡಿ.ಕೆ.ಶಿವಕುಮಾರ್‌
0
SHARES
0
VIEWS
Share on FacebookShare on Twitter

ಬೆಂಗಳೂರು: ಕೇಂದ್ರ ಸಚಿವ ಸೋಮಣ್ಣ ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆಯನ್ನು ಜುಲೈ 4-5ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಸೋಮಣ್ಣ ಅವರು ಸ್ಥಳೀಯ ಸಂಸದರೂ ಆಗಿರುವ ಕಾರಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ:

“ಇಂದು ತುಮಕೂರಿನಲ್ಲಿ ಯೋಜನೆ ಕಾಮಗಾರಿಯ ಗುತ್ತಿಗೆದಾರರ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಪರಮೇಶ್ವರ್ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದೆ” ಎಂದು ಹೇಳಿದರು.

“ಆದ್ಯತೆ ಮೇರೆಗೆ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಸಮಯದ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಈ ಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಗುತ್ತಿದೆ. ಈ ಯೋಜನೆಗೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ಪರಿಶೀಲನೆ ಮಾಡಲು ನಾನು ತುಮಕೂರಿಗೆ ಭೇಟಿ ನೀಡಿದ್ದೇನೆ” ಎಂದರು.

“ನಾನು ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. ಈ ಭಾಗದಲ್ಲಿ ನೀರನ್ನು ಯಾವ ರೀತಿ ಸಂಗ್ರಹಿಸುವುದು ಎಂಬ ತಾಂತ್ರಿಕ ಸಾಧ್ಯತೆಗಳ ಪರಿಶೀಲನೆ ನಡೆಸುತ್ತಿದ್ದೇವೆ.

ಈಗಾಗಲೇ ಸ್ಥಳೀಯ ನಾಯಕರು, ಗ್ರಾಮಸ್ಥರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಸಾರ್ವಜನಿಕರು ತಮ್ಮ ನೋವು ಹೇಳಿಕೊಂಡಿದ್ದಾರೆ. ಒಂದು ಕಡೆ ಅಣೆಕಟ್ಟು ನಿರ್ಮಾಣ ಮಾಡಬೇಕೆ, ಎರಡು ಕಡೆ ಮಾಡಬೇಕೆ ಅಥವಾ ಜನರ ಸಲಹೆಯಂತೆ ಕೆರೆಗಳನ್ನು ಬಳಸಿಕೊಂಡು ನೀರು ಸಂಗ್ರಹಿಸಬಹುದೇ ಎಂಬ ಸಾಧ್ಯತೆಗಳನ್ನು ಅಧ್ಯಯನ ಮಾಡಲಾಗುವುದು” ಎಂದು ತಿಳಿಸಿದರು.

ಅಧ್ಯಕ್ಷನಾಗಿ ಶಾಸಕರಿಂದ ಮಾಹಿತಿ ಸಂಗ್ರಹ

ಶಾಸಕ ಬಿ.ಆರ್ ಪಾಟೀಲ್ ಅವರ ಭೇಟಿ ಬಗ್ಗೆ ಕೇಳಿದಾಗ, “ಪಕ್ಷದ ಅಧ್ಯಕ್ಷನಾಗಿ ನಾನು ವಾಸ್ತವಾಂಶ ತಿಳಿಯಬೇಕಾಗಿತ್ತು. ಹೀಗಾಗಿ ಅವರನ್ನು ಕರೆಸಿ ಮಾತನಾಡಿದೆ. ಅವರು ತಮ್ಮ ವಿಚಾರ ಹೇಳಿದ್ದಾರೆ. ನಾನು ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಸಚಿವ ಜಮೀರ್ ಅವರೊಂದಿಗೂ ಮಾತನಾಡುತ್ತೇವೆ. ಈ ಮಧ್ಯೆ ನಮ್ಮ ಪಕ್ಷದ ವರಿಷ್ಠರೂ ಕೂಡ ಆಗಮಿಸುತ್ತಿದ್ದು, ಎಲ್ಲರ ಜೊತೆ ಮಾತನಾಡಿ ಮಾಹಿತಿ ಪಡೆಯಲಿದ್ದಾರೆ” ಎಂದು ತಿಳಿಸಿದರು.

ಹಲವು ಶಾಸಕರು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದು, ಇದು ಮುಖ್ಯಮಂತ್ರಿಗಳು ಆಡಳಿತದಲ್ಲಿ ಹಿಡಿತ ಕಳೆದುಕೊಳ್ಳುತ್ತಿದ್ದಾರೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಏನಾದರೂ ಇದ್ದರೆ ನಮ್ಮ ಪಕ್ಷದ ವರಿಷ್ಠರ ಜೊತೆ ನಾನು ಹಾಗೂ ಮುಖ್ಯಮಂತ್ರಿಗಳು ಮಾತನಾಡುತ್ತೇವೆ. ಆಡಳಿತದಲ್ಲಿ ಯಾವುದೇ ಹಿಡಿತ ಕಳೆದುಕೊಂಡಿಲ್ಲ. ಇದು ಮಾಧ್ಯಮಗಳ ಸೃಷ್ಟಿ” ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಸುರೇಶ್ ಬಾಬು ಅವರು ಮೊದಲು ತಮ್ಮ ಪಕ್ಷ ಸರಿಪಡಿಸಿಕೊಳ್ಳಲಿ. ತಮ್ಮ ಕಾವಲಿಯಲ್ಲಿರುವ ತೂತು ಮುಚ್ಚಿಕೊಳ್ಳಲಿ. ಜಿ.ಟಿ ದೇವೇಗೌಡ ಸೇರಿದಂತೆ ಬೇರೆ ಶಾಸಕರ ವಿಚಾರ ಸರಿಪಡಿಸಲಿ” ಎಂದು ತಿರುಗೇಟು ನೀಡಿದರು.

ದೇಶಕ್ಕಾಗಿ ಪ್ರಾಣ ಕೊಟ್ಟಿರುವವರು ಇಂದಿರಾ ಗಾಂಧಿ

ಇಂದಿರಾ ಗಾಂಧಿ ಅವರನ್ನು ಬಿಜೆಪಿ ಹಿಟ್ಲರ್ ಗೆ ಹೋಲಿಕೆ ಮಾಡಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಕೇಳಿದಾಗ, “ಬಿಜೆಪಿಯಲ್ಲಿ ಸಮಸ್ಯೆ ಇದೆ. ತುರ್ತುಪರಿಸ್ಥಿತಿ ನಂತರ ದೇಶದ ಜನ ಇಂದಿರಾ ಗಾಂಧಿ ಅವರ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದೆ. 1980ರಲ್ಲೂ ಇಂದಿರಾ ಅವರು ದೇಶವನ್ನು ಮುನ್ನಡೆಸಿದ್ದಾರೆ. ಆ ಸಮಯದಲ್ಲಿ ಜನತಾ ಪರಿವಾರ ಅಥವಾ ಬೇರೆಯವರು ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಇಂದಿರಾ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈಗ ಪ್ರಚಾರಕ್ಕಾಗಿ ಬಿಜೆಪಿ ಈ ವಿಚಾರವನ್ನು ಚರ್ಚೆಗೆ ತರುತ್ತಿದ್ದಾರೆ” ಎಂದು ಹೇಳಿದರು.

“ತುರ್ತುಪರಿಸ್ಥಿತಿ ಬಂದು 50 ವರ್ಷ ಆಗಿದೆ. ಈಗ ಅದು ಮುಗಿದ ಅಧ್ಯಾಯ. ಆಗಿನಿಂದ ಈಗಿನವರೆಗೂ ಕಾಂಗ್ರೆಸ್ ಆಡಳಿತದಲ್ಲಿ ದೇಶ ಬಲಿಷ್ಠವಾಗಿ ನಿಂತಿದೆ. ಬಿಜೆಪಿ ಆಡಳಿತದಲ್ಲಿ ಯಾವ ಪರಿಸ್ಥಿತಿ ಇದೆ ಎಂದು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನಮ್ಮ ಸಹಮತವಿದೆ. ದೇಶ ಯಾವ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿಯ ಸಂಸದರನ್ನೇ ವೈಯಕ್ತಿಕವಾಗಿ ಕೇಳಿ. ಅವರೇ ಹೇಳುತ್ತಾರೆ” ಎಂದು ತಿಳಿಸಿದರು.

Tags: BreakingNewsdkshivakumarKannadaLatestNewsKarnatakasomannaVijayasakshivijayasakshinews
Previous Post

ಸಿನಿಮಾ ರಿಲೀಸ್‌ ಸಂದರ್ಭದಲ್ಲೇ ನಟ ಮಂಚು ವಿಷ್ಣು ಕಚೇರಿ ಮೇಲೆ ದಾಳಿ

Next Post

ಮಕ್ಕಳಲ್ಲಿ ಅಸಮಾನತೆ ಬೇಡ: ಜಿಲ್ಲಾಧಿಕಾರಿ ದಿವ್ಯ ಪ್ರಭು

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮಕ್ಕಳಲ್ಲಿ ಅಸಮಾನತೆ ಬೇಡ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಮಕ್ಕಳಲ್ಲಿ ಅಸಮಾನತೆ ಬೇಡ: ಜಿಲ್ಲಾಧಿಕಾರಿ ದಿವ್ಯ ಪ್ರಭು

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

October 25, 2026
ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

October 25, 2026
ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

October 25, 2026
ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

‘ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ಡೀಲ್!’: ಸ್ಟಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಗಂಭೀರ ಆರೋಪ

October 25, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

October 25, 2026
ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

October 25, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link