ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಕ್ಕಳು ದೇಶದ ಸಂಪತ್ತು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪಲ್ಸ್ ಪೋಲಿಯೋ ಹನಿ ತಪ್ಪದೇ ಹಾಕಿಸಬೇಕು ಎಂದು ಮುಳಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರವೀಣ ತುಪ್ಪದ ಹೇಳಿದರು.
ಅವರು ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ. 1ರಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಮಕ್ಕಳೇ ಭವಿಷ್ಯದ ಉತ್ತಮ ಪ್ರಜೆಗಳು. ಮಕ್ಕಳ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಯಾವುದೇ ಆತಂಕ ಪಡದೇ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಹನಿ ಹಾಕಿಸಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಎಂದರು.
ನಿವೃತ್ತ ಆರ್‌ಟಿಓ ಬಿ.ಡಿ. ಹರ್ತಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿ ಮಾತನಾಡಿ, ಪೋಲಿಯೋ ಒಂದು ಮಾರಕ ಖಾಯಿಲೆಯಾಗಿದ್ದು, ಈ ಖಾಯಿಲೆಗೆ ಹೋಗಲಾಡಿಸಲು ಪಲ್ಸ್ ಪೋಲಿಯೋ ಹನಿಯನ್ನು ಹಾಕಿಸುವ ಮೂಲಕ ಮಕ್ಕಳ ಉತ್ತಮ ಭವಿಷ್ಯಕ್ಕೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಡಾ. ಎಸ್.ಸಿ. ಚವಡಿ, ಎಸ್.ಸಿ. ಬಡ್ನಿ, ಅಂಗನವಾಡಿ ಶಿಕ್ಷಕಿ ಎಂ.ಎಂ. ಅಬ್ಬುನವರ, ರೇಣುಕಾ ಯಲಿಗಾರ, ಆರೋಗ್ಯ ಸಿಬ್ಬಂದಿ ನಜೀರ ನದಾಫ್, ಶಿವಾನಂದ ಆಪ್ತಗೇರಿ, ಮುತ್ತು ಬಳ್ಳಾರಿ, ಸುಮಿತ್ರಾ ಹೊಂಬಳ, ಮಂಜುನಾಥ ದೇಸಾಯಿ, ಕಲ್ಲಪ್ಪ ಚಿನ್ನಿ, ಎಚ್.ಎನ್. ಗದಗ, ಮುನೀರ್ ನದ್ದಿಮುಲ್ಲಾ ಇದ್ದರು.



