ಅಭಿಮಾನ, ಪ್ರೀತಿ ನಮ್ಮ ಕುಟುಂಬದ ನೋವಿಗೆ ಕಾರಣವಾಗಬಾರದು: ನಟ ಶಿವರಾಜ್‌ ಕುಮಾರ್

0
Spread the love

ಬೆಂಗಳೂರಿನಲ್ಲಿ ನಡೆದ ಆರ್‌ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ. ಸುಮಾರು ಹದಿನೆಂಟು ವರ್ಷಗಳ ಬಳಿಕ ಆರ್‌ ಸಿ ಬಿ ಕಪ್‌ ಗೆದ್ದ ಸಂಭ್ರಮದಲ್ಲಿದ್ದ ಅಭಿಮಾನಿಗಳಿಗೆ ಕೆಲವೇ ಗಂಟೆಗಳಲ್ಲಿ ನಡೆದ ಸಾವು ಗೆಲುವಿನ ಸಂಭ್ರಮವನ್ನು ಮರೆ ಮಾಚಿದೆ. ಘಟನೆ ಬಗ್ಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ನಟ ಶಿವರಾಜ್​ಕುಮಾರ್ , ನಟಿ ರಕ್ಷಿತಾ ಪ್ರೇಮ್, ನಿಶ್ವಿಕಾ ನಾಯ್ಡು ಸೇರಿದಂತೆ ಅನೇಕರು ಘಟನೆಯ ಬಗ್ಗೆ ಪೋಸ್ಟ್ ಮಾಡಿ ಸಂತ್ರಸ್ತರ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ.

Advertisement

‘ಗೆಲುವಿನ ಸಂಭ್ರಮಕ್ಕೆ ಸಾವಿನ ಸೂತಕ ತುಂಬಾ ನೋವಿನ ಸಂಗತಿ. ನೊಂದ ಕುಟುಂಬಸ್ಥರಿಗೆ ಆ ದೇವರು ಈ ನೋವನ್ನು ಭರಿಸುವ ಶಕ್ತಿ ಕೊಡಲಿ. ಸರ್ಕಾರ ಮೃತಪಟ್ಟವರಿಗೆ ನೆರವಾಗಿ ನಿಲ್ಲಲ್ಲಿ ಎಂದು ಪ್ರಾರ್ಥಿಸುತ್ತೇವೆ. ನಾನು ಇಂದಿಗೂ ಹೇಳೋದು ಒಂದೇ, ಅಭಿಮಾನ, ಪ್ರೀತಿ ನಮ್ಮ ಕುಟುಂಬದ ನೋವಿಗೆ ಕಾರಣವಾಗಬಾರದು. ನಿಮ್ಮ ಅಭಿಮಾನ, ನಿಮ್ಮ ಪ್ರೀತಿ ಎಲ್ಲರನ್ನು ಕಾಪಾಡುತ್ತದೆ. ನಿಮ್ಮ ಕುಟುಂಬದವರನ್ನು ನೀವು ಮಾತ್ರ ಕಾಪಾಡಲು ಸಾಧ್ಯ. ಓಂ ಶಾಂತಿ’ ಎಂದು ಶಿವಣ್ಣ ಪೋಸ್ಟ್ ಮಾಡಿದ್ದಾರೆ.

‘ಅಮಾಯಕ ಜೀವಗಳು ಬಲಿಯಾಗಿವೆ. ಸುದ್ದಿ ವಾಹಿನಿಗಳಲ್ಲಿ ಕಾರ್ಯಕ್ರಮ ಲೈವ್ ವೀಕ್ಷಣೆಗೆ ಅವಕಾಶ ಇತ್ತು. ಅಲ್ಲಿಯೇ ಕಾರ್ಯಕ್ರಮ ವೀಕ್ಷಿಸಬಹುದಿತ್ತು. ಮನೆಯಲ್ಲೇ ಇರಿ. ವಿಧಾನಸೌಧದಲ್ಲಿ ಕಾರ್ಯಕ್ರಮ ಸಂಘಟಿತವಾಗಿ ನಡೆದಿಲ್ಲ. ಇದೊಂದು ರಾಜಕೀಯ ಕಾರ್ಯಕ್ರಮದ ರೀತಿ ಇತ್ತು’ ಎಂದು ನಟಿ ಅಸಮಧಾನ ಹೊರಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here