ಪದವಿ ಪ್ರಥಮ ವರ್ಷದ ಪ್ರವೇಶ ಆರಂಭ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಬಿ.ಎ, ಬಿ.ಕಾಂ, ಬಿ.ಎಸ್ಸಿ ಪದವಿಗಳ ಪ್ರಥಮ ವರ್ಷಕ್ಕೆ ಪ್ರವೇಶ ಆರಂಭವಾಗಿದೆ.

Advertisement

ಹಳೆಯ ನ್ಯಾಯಾಲಯ ಕಟ್ಟಡ, ಪಾಲಾ ಬಾದಾಮಿ ರಸ್ತೆಯಲ್ಲಿ ಸುಸಜ್ಜಿತ ಕಟ್ಟಡ, ಆಧುನಿಕ ತಂತ್ರಜ್ಞಾನ ಅಳವಡಿಕೆಯ ವರ್ಗ ಕೊಠಡಿಗಳು, ಶಾಲಾ ಕೊಠಡಿ ಮತ್ತು ಆವರಣಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಗ್ರಂಥಾಲಯ, ಸಭಾಂಗಣ ಮತ್ತು ಕೊಠಡಿಗಳು, ಆಕರ್ಷಕ ಉದ್ಯಾನವನ, ನುರಿತ ಮತ್ತು ಅನುಭವಿ ಪ್ರಾಧ್ಯಾಪಕರನ್ನು ಹೊಂದಿರುವ ಈ ಕಾಲೇಜು ಇತ್ತೀಚೆಗೆ ನ್ಯಾಕ್ ಕಮಿಟಿಯಿಂದ ಬಿ+ ಶ್ರೇಣಿಯ ಮಾನ್ಯತೆ ಹೊಂದಿದೆ.

ಕಲಾ ವಿಭಾಗದಲ್ಲಿ ಇತಿಹಾಸ, ಐಚ್ಛಿಕ ಕನ್ನಡ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಇಂಗ್ಲೀಷ್, ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ, ಗಣಿತಶಾಸ್ತ್ರ, ಗಣಕಶಾಸ್ತ್ರ, ಮತ್ತು ವಾಣಿಜ್ಯ ವಿಭಾಗದಲ್ಲಿ ವಿಶ್ವವಿದ್ಯಾಲಯ ನಿಗದಿಪಡಿಸಿರುವ ವಿಷಯಗಳ ಅಧ್ಯಯನಕ್ಕೆ ಅವಕಾಶವಿದೆ. ವಿದ್ಯಾರ್ಥಿಗಳ ಭೌತಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಅವಶ್ಯವಿರುವ ಎಲ್ಲ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ಗದಗ-ಬೆಟಗೇರಿ ನಗರದ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶ ಪಡೆದು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬೇಕೆಂದು ಕಾಲೇಜಿನ ಪ್ರಾಂಶುಪಾಲರಾದ ಎಮ್.ಯು. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಳಿಗಾಗಿ ದೂ.ಸಂ-9845678751, 9902722685, 9886105765, 9686538150, 9900151161 ಸಂಪರ್ಕಿಸಬಹುದಾಗಿದೆ.


Spread the love

LEAVE A REPLY

Please enter your comment!
Please enter your name here