ಹುಬ್ಬಳ್ಳಿ: ಸೈಟ್ ವಾಪಸ್ ಕೊಡುವ ಮೂಲಕ ತಪ್ಪಾಗಿದೆ ಎನ್ನುವುದು ಒಪ್ಪಿಕೊಂಡಂತಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿರುವ ವಿಚಾರವಾಗಿ ಮಾತನಾಡಿದ ಅವರು, ಸೈಟ್ ವಾಪಸ್ ಕೊಡುವ ಮೂಲಕ ತಪ್ಪಾಗಿದೆ ಎನ್ನುವುದು ಒಪ್ಪಿಕೊಂಡಂತಾಗಿದೆ.
Advertisement
ಈ ಹಿಂದೆ ಯಡಿಯೂರಪ್ಪ ಸೈಟ್ ವಾಪಸ್ ಮಾಡಿದಾಗ ಇದೇ ಸಿದ್ದರಾಮಯ್ಯ ಏನು ಹೇಳಿದ್ದರು ಎಂದು ನೆನಪಿಸಿಕೊಳ್ಳಲಿ. ಆಗ ಸಿದ್ದರಾಮಯ್ಯ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು. ಇದೇ ಮಾತು ಈಗ ಸಿದ್ದರಾಮಯ್ಯ ಅವರಿಗೂ ಅನ್ವಯ ಆಗುತ್ತದೆ. ಸೈಟ್ ವಾಪಸ್‌ನೊಂದಿಗೆ ಸೈಟು ಹಂಚಿಕೆ ಕಾನೂನುಬಾಹಿರವಾಗಿ ಹಾಗೂ ಅಕ್ರಮವಾಗಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.