ವಿಜಯಸಾಕ್ಷಿ ಸುದ್ದಿ, ಗದಗ: ನಗರದ ದಿ ಕಾನ್ಸೆಲ್ ಸೊಸೈಟಿ ಆವರಣದಲ್ಲಿರುವ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗುರುವಾರ ಆಚರಿಸಲಾಯಿತು.
ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಡಿ.ಆರ್. ಪಾಟೀಲ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಅಹಿಂಸಾ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಮುನ್ನಡೆ ಸಾಧಿಸಬೇಕು ಎಂದು ಹೇಳಿದರು.
ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ, ಗದಗ ಜಿಲ್ಲಾ ಪ.ಜಾ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಬಸವರಾಜ ಕಡೆಮನಿ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಗದಗ-ಬೆಟಗೇರಿ ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ ಬೊಮ್ಮನಹಳ್ಳಿ, ತಾ.ಪಂ ಮಾಜಿ ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ಡಾ. ಅರವಿಂದ ಪಾಟೀಲ, ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಸಾವಿತ್ರಿ ಹೂಗಾರ, ಗದಗ-ಬೆಟಗೇರಿ ಆಶ್ರಯ ಸಮಿತಿ ಸದಸ್ಯರಾದ ರೇಖಾ ಜಡಿ, ಮುಖಂಡರಾದ ಚಾಂದಸಾಬ್ ಕೊಟ್ಟೂರ, ಶಿವರಾಜ ಕೋಟಿ, ಸಮೀರ ಕೊಟ್ಟೂರ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ನಿರ್ವಹಿಸಿದರು.


