ವಕೀಲೆ ಜೀವಾ ಆತ್ಮಹತ್ಯೆ ಕೇಸ್: DYSP ಕನಕಲಕ್ಷ್ಮೀ ಅರೆಸ್ಟ್

0
Spread the love

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣದ ತನಿಖೆಯ ನೆಪದಲ್ಲಿ ಸಿಐಡಿ ಪೊಲೀಸರು ನೀಡಿದ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದ ವಕೀಲೆ ಎಸ್‌ ಜೀವಾ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ಕನಕಲಕ್ಷ್ಮೀ ಬಂಧನವಾಗಿದೆ.

Advertisement

ಎಸ್ ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದು, ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ,

25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು.


Spread the love

LEAVE A REPLY

Please enter your comment!
Please enter your name here