ಬೆಂಗಳೂರು:- ಸಿದ್ದರಾಮಯ್ಯ ಸಂಪುಟದ ಸಚಿವರೊಬ್ಬರಿಗೆ ಸಂಕಷ್ಟ ಎದುರಾಗಿದ್ದು, ಸಚಿವ ಎಂಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ಗೆ ಸಂಕಷ್ಟ ಎದುರಾಗಿದೆ. ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದೆ. ಈ ಸಂಬಂಧ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ.
ಸಚಿವ ಎಂಬಿ ಪಾಟೀಲ್ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ. ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
ಬಿಡದಿ, ವಸಂತ ನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ ಅಂತ ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.
ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಿದ್ದಾರೆ ಅಂತ ಆರೋಪಿಸಿದ್ದು, ಇಂದು ರಾಜ್ಯಪಾಲರನ್ನು ಭೇಟಿಯಾಗಿ ಎಂಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.