ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿರುವ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರು ಎಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್ಗೆ ಹಾಜರಾಗಿದ್ದಾರೆ.
Advertisement
ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು. ಫೆಬ್ರವರಿ 25ಕ್ಕೆ ಮತ್ತೆ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.
ಜಾಮೀನು ಸಿಕ್ಕಿದರೂ ಇಲ್ಲಿಯವರೆಗೆ ಪವಿತ್ರಾಗೌಡ-ದರ್ಶನ್ ಭೇಟಿಯಾಗಿರಲಿಲ್ಲ. ಈ ಹಿಂದೆ ಕೋರ್ಟ್ ವಿಚಾರಣೆಯ ಸಮಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಮುಖಿಯಾಗಿದ್ದೇ ಕೊನೆ. ಅದಾದ ಬಳಿಕ ದರ್ಶನ್ ಹಾಗೂ ಪವಿತ್ರಾ ದೂರವಾಗಿದ್ದರು. ಇದೀಗ ನ್ಯಾಯಾಲಯದಲ್ಲಿ ಇಬ್ಬರು ಮುಖಾಮುಖಿಯಾಗಿದ್ದಾರೆ.