HomeBengaluru Newsಹೈಕೋರ್ಟ್ ಬಳಿಕ KSAT ಕಲಾಪ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ: ದೂರು ದಾಖಲು

ಹೈಕೋರ್ಟ್ ಬಳಿಕ KSAT ಕಲಾಪ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ: ದೂರು ದಾಖಲು

For Dai;y Updates Join Our whatsapp Group

Spread the love

ಬೆಂಗಳೂರು:- ಈ ಹಿಂದೊಮ್ಮೆ ಹೈಕೋರ್ಟ್ ನಲ್ಲಿ ನಡೆದ ಘಟನೆ ಮರುಕಳಿಸಿದೆ. ಕೆಎಸ್‌ಎಟಿ ಕಲಾಪ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶಿಸಿ ದುಷ್ಕೃತ್ಯ ಎಸಗಲಾಗಿದೆ. ಘಟನೆ ಬಗ್ಗೆ ಕೆಎಸ್‌ಎಟಿಯ ಅಧಿಕಾರಿ ಬೆಂಗಳೂರಿನ ಸೆಂಟ್ರಲ್ ಸೆನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ ವೇಳೆ ಲಾಗಿನ್ ಆಗಿ ಆಕ್ಷೇಪಾರ್ಹ ವಿಡಿಯೋ ಪ್ರದರ್ಶನ ಮಾಡಿದ ಅನಾಮಧೇಯ ವ್ಯಕ್ಯಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಅಧಿಕಾರಿಗಳು ಆನ್‌ಲೈನ್ ಕಲಾಪ ಸ್ಥಗಿತಗೊಳಿಸಿದರು.

ಈ ಬಗ್ಗೆ ಐಟಿ ಕಾಯ್ದೆ ಸೆಕ್ಷನ್ 67, 67a ಅಡಿ ಪ್ರಕರಣ ದಾಖಲಾಗಿದೆ. ಅಶ್ಲೀಲ ವಿಡಿಯೋ ಪ್ರದರ್ಶಿಸಿದ ಕಿಡಿಗೇಡಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಾರದ ಹಿಂದೆ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಕಲಾಪದ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಘಟನೆ ನಡೆದಿತ್ತು. ಇದೀಗ ಮತ್ತೆ ಅಂತಹ ಘಟನೆ ನಡೆದಿದೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!