ಬೆಂಗಳೂರು: ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವೇಳೆ ರಾಜ್ಯ ಕಾಂಗ್ರೆಸ್‌ನಲ್ಲಿ ಕಾಣಿಸಿಕೊಂಡಿರುವ ಆಂತರಿಕ ಭಿನ್ನಮತ ಶಮನಕ್ಕೆ ಪ್ರಯತ್ನ ಆರಂಭಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಶಾಸಕರು ಚರ್ಚೆ ಮಾಡುತ್ತಿಲ್ಲ, ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ. ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ, ಸಿದ್ದರಾಮಯ್ಯ ಬಳಿಕ ಅವರೇ ಆಗಬೇಕಲ್ವಾ? ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ? ಆದ್ರೆ ಈ ಅವಧಿಯಲ್ಲೇ ಆಗ್ತಾರ ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಅಂತ ಪ್ರಶ್ನೆ ಮಾಡಿದರು.
ಒಕ್ಕಲಿಗರ ಸಂಘದಿಂದ ಡಿಕೆಶಿ ಸಿಎಂ ಮಾಡಲು ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೊ ಹೇಳಿದ್ರು ಅಂದ ಮಾತ್ರಕ್ಕೆ ಹೇಳಿದವರನ್ನೆಲ್ಲಾ ಸಿಎಂ ಮಾಡೋದಕ್ಕೆ ಆಗಲ್ಲ. ಅವರು ಜಾತಿ ಅಭಿಮಾನದಿಂದ ಹೇಳಿದ್ದಾರೆ. ಹೈಕಮಾಂಡ್ ನಾಯಕರು ಅಂತಿಮ ನಿರ್ಧಾರ ಮಾಡ್ತಾರೆ ಎಂದರು.