ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್, ಮೆಟ್ರೋ ದರ ಏರಿಕೆ ಬಳಿಕ ನಂದಿನಿ ಹಾಲಿನ ದರ ಏರಿಕೆ

0
Spread the love

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿನ ದರ ಹೆಚ್ಚಿಸಿ ವರ್ಷ ಕಳೆದೇ ಇಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ​ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸರಿಲಿಲ್ಲ. ಆದ್ರೆ, ಇದೀಗ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

Advertisement

ಹೌದು ಪ್ರತಿ ಲೀಟರ್‌ ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.

ಯಾವ ಹಾಲಿನ ದರ ಎಷ್ಟಾಗಬಹುದು?

– ನೀಲಿ‌ ಪ್ಯಾಕೆಟ್ ಹಾಲು – 44 ರೂ ನಿಂದ 48 ರೂ
– ಆರೆಂಜ್ ಪ್ಯಾಕೆಟ್ ಹಾಲು – 54 ರೂ‌. ನಿಂದ 58  ರೂ.
– ಸಮೃದ್ಧಿ ಹಾಲಿನ‌ ಪ್ಯಾಕೆಟ್ 56 ರೂ. ನಿಂದ 60 ರೂ.
– ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ.
– ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ.

6-8 ರೂ. ಹಾಲಿನ ದರ ಹೆಚ್ಚಳಕ್ಕೆ ಒಕ್ಕೂಟಗಳು ಪ್ರಸ್ತಾಪಿಸಿದ್ದವು. ಆದರೆ ಸೋಮವಾರ ನಡೆದ ಸಭೆಯಲ್ಲಿ ಸಿಎಂ ಈ ದರಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಹಾಲಿನ ದರ ಹೆಚ್ಚಳ ಹಣ ಕೇವಲ ರೈತರಿಗಷ್ಟೇ ಇರಲಿ ಎಂದಿದ್ದರು. ಆದರೆ ಸಭೆಯ ಬಳಿಕ 5 ರೂ.ಯಾದರೂ ಹೆಚ್ಚಳ ಮಾಡಿ, ಅದರಲ್ಲಿ 3 ರೂ. ರೈತರಿಗೆ, 2 ರೂ. ಒಕ್ಕೂಟಗಳಿಗೆ ಇರಲಿ ಎಂದು ಪ್ರಸ್ತಾಪಿಸಿದ್ದರು. ಆದ್ರೆ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ 4 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ.

 


Spread the love

LEAVE A REPLY

Please enter your comment!
Please enter your name here