HomeYadgirಯಾದಗಿರಿಯಲ್ಲಿ RSS ಪಥಸಂಚಲನ ಎಫೆಕ್ಟ್: ಇಬ್ಬರು ಸರ್ಕಾರಿ ಶಿಕ್ಷಕರಿಗೆ ಅಮಾನತು ಬಿಸಿ, ದೂರು ಬೆನ್ನಲ್ಲೇ ಶಿಕ್ಷಣ...

ಯಾದಗಿರಿಯಲ್ಲಿ RSS ಪಥಸಂಚಲನ ಎಫೆಕ್ಟ್: ಇಬ್ಬರು ಸರ್ಕಾರಿ ಶಿಕ್ಷಕರಿಗೆ ಅಮಾನತು ಬಿಸಿ, ದೂರು ಬೆನ್ನಲ್ಲೇ ಶಿಕ್ಷಣ ಇಲಾಖೆ ಕ್ರಮ

For Dai;y Updates Join Our whatsapp Group

ಯಾದಗಿರಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರ್ಕಾರಿ ಶಿಕ್ಷಕರ ವಿರುದ್ಧ ಯಾದಗಿರಿ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಹುಣಸಗಿ ತಾಲೂಕಿನ ಅಣ್ಣಾಸಾಹೇಬ ದೇಶಮುಖ ಹಾಗೂ ಗುರುರಾಜ ಜೋಶಿ ಅವರನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಇಬ್ಬರೂ ಸುಮಾರು ಎಂಟು ತಿಂಗಳ ಹಿಂದೆ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಈ ಕುರಿತು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ ಅವರು ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದರು. ದೂರು ಪರಿಶೀಲನೆ ಬಳಿಕ ಇಲಾಖೆ ಅಮಾನತು ಆದೇಶ ಹೊರಡಿಸಿದೆ.

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ವಿಚಾರ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಸರ್ಕಾರಿ ಸೇವೆಯಲ್ಲಿರುವವರು ಸಂಘಟನೆಯ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿಲುವು ಈಗಾಗಲೇ ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ, ಯಾದಗಿರಿಯಲ್ಲಿ ಇಬ್ಬರು ಶಿಕ್ಷಕರ ಅಮಾನತು ಕ್ರಮ ಇದೀಗ ರಾಜ್ಯ ರಾಜಕೀಯದಲ್ಲೂ ಚರ್ಚೆಗೆ ಕಾರಣವಾಗಿದೆ.

ಎಂಟು ತಿಂಗಳ ಹಿಂದೆ ನಡೆದಿದ್ದ ಪಥಸಂಚಲನದ ವಿಚಾರದಲ್ಲಿ ಇದೀಗ ಕ್ರಮ ಕೈಗೊಂಡಿರುವುದು ಗಮನ ಸೆಳೆದಿದ್ದು, ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ನೌಕರರ ವಿರುದ್ಧವೂ ಇದೇ ರೀತಿಯ ಕ್ರಮ ಜರುಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img