ಹೊಸಪೇಟೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ‘ದೇವಿ’ ಎಂಬ ಹೆಸರಿನ ಹೆಣ್ಣು ಹುಲಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕಮಲಾಪುರದ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯದಲ್ಲಿ ಜರುಗಿದೆ.
Advertisement
ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿದ್ದ ಹೆಣ್ಣು ಹುಲಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು. ಮೃಗಾಲಯದಲ್ಲಿರುವ ರಕ್ಷಣಾ ಕೇಂದ್ರದಲ್ಲಿ ಕಳೆದ ಎರಡು ವರ್ಷಗಳಿಂದ ಚಿಕಿತ್ಸೆ ನೀಡಿದ ಕಾರಣ ಹುಲಿಯ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿತ್ತು. ಆದರೆ ಈಗ ವಯೋಸಹಜವಾಗಿ ಮೃತಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಹುಲಿಗೆ ಅಂದಾಜು 18 ರಿಂದ 19 ವರ್ಷ ವಯಸ್ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.