ಹುಡುಗಿ ವಿಚಾರಕ್ಕೆ ಕಿರಿಕ್: ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಭೀಕರ ಹಲ್ಲೆ!

0
Spread the love

ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜರುಗಿದೆ.

Advertisement

ಹಲ್ಲೆಗೊಳಗಾದ ಯುವಕನನ್ನು ಕುಶಾಲ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೇಮಂತ್, ಯಶವಂತ್​, ಶಿವಶಂಕರ್, ಶಶಾಂಕ್ ಗೌಡ ಬಂಧಿತರು.

ಕುಶಾಲ್ ಮತ್ತು ಯುವತಿ ಮಧ್ಯೆ ಕಾಲೇಜಿನ ದಿನಗಳಲ್ಲಿ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ ಬೇರೊಬ್ಬ ಹುಡುಗನ ಪರಿಚಯವಾಗಿತ್ತು. ಇದನ್ನು ಸಹಿಸಲಾಗದೆ ಕುಶಾಲ್, ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನು. ಹೀಗಾಗಿ, ಯುವತಿಯ ಗೆಳೆಯ ಮತ್ತು ಆತನ ಸ್ನೇಹಿತರು ಸೇರಿಕೊಂಡು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಅಂತ ಕುಶಾಲ್​ನನ್ನು ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡು ಅಪಹರಿಸಿದ್ದಾರೆ.

ಬಳಿಕ, ಆರೋಪಿಗಳು ಕುಶಾಲ್​ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಕುಶಾಲ್​ನ ಬಟ್ಟೆ ಬಿಚ್ಚಿ ಮರ್ಮಾಂಗ ತುಳಿದು ವಿಕೃತಿ ಮೆರೆದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here