ಕಲಬುರ್ಗಿ:- ಡೆತ್ ನೋಟ್ ಬರೆದಿಟ್ಟು ವಿಡಿಯೋ ಮಾಡುತ್ತಲೇ ಕೃಷಿ ಅಧಿಕಾರಿ ನಿದ್ರೆ ಮಾತ್ರೆ ತಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರ್ಗಿಯಲ್ಲಿ ಜರುಗಿದೆ.
ಧರ್ಮರಾಜ್ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ ಆಗಿದ್ದು, ಕೃಷಿಸಚಿವ ಹಾಗೂ ಕೃಷಿ ಜಂಟಿ ನಿರ್ದೇಶಕ ಸಮದ ಪಟೇಲ್ ಹೆಸರಿನಲ್ಲಿ ಪತ್ರ ಬರೆದು ಸೂಸೈಡ್ ಗೆ ಯತ್ನಿಸಿರುವುದು ತಿಳಿದು ಬಂದಿದೆ. ಜೇವರ್ಗಿ ತಾಲೂಕಿನಲ್ಲಿ ಕೃಷಿ ಅಧಿಕಾರಿಯಾಗಿ ಧರ್ಮರಾಜ್ ಕರ್ತವ್ಯ ನಿರ್ವಹಿಸುತ್ತಿದ್ದ. ಇದೀಗ ಅವರು ಆತ್ಮಹತ್ಯೆಗೆ ಯತ್ನಿಸಿದ ವಿಡಿಯೋ ಭಾರಿ ವೈರಲ್ ಆಗಿದ್ದು, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಅಲ್ಲದೇ ವರ್ಗಾವಣೆ ಹೆಸರಿನಲ್ಲಿ 2.50 ಸಾವಿರ ವಸೂಲಿ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ವಿಜಾಪುರ ಜಿಲ್ಲೆಗೆ ವರ್ಗಾವಣೆ ಮಾಡುವುದಾಗಿ ಎರಡುಲಕ್ಷ ಬೇಡಿಕೆ ಇಟ್ಟಿದ್ದಾರೆ ಎಂದು ದೇವರಾಜ್ ಆರೋಪಿಸಿದ್ದಾರೆ. ಸಧ್ಯ ಈ ವಿಡಿಯೋ ಇದೀಗ ವೈರಲ್ ಆಗಿದೆ.