HomeKarnataka Newsಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ.!

ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ.!

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಗಳು ಜೋರಾಗಿತ್ತು. ಇದೀಗ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಓಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದಿನಿ. ಅಲ್ಲಿ ಹಿಂದುಳಿದ ವರ್ಗದವರು ಅಧ್ಯಕ್ಷರಾಗಿದ್ದಾರೆ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತವೆ.

ಈ ಬಗ್ಗೆ ನಿರ್ಧಿಷ್ಟವಾಗಿ ನಾನು ಹೇಳುವುದಕ್ಕೆ ಆಗುವುದಿಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಇನ್ನೂ ಒಂದು ಎರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಮಾಡುತ್ತೇವೆ ಎಂಟು ದಿನದಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದು ಖರ್ಗೆ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!