ಚೆನ್ನೈ:- ತಾಂತ್ರಿಕ ಸಮಸ್ಯೆ ಹಿನ್ನೆಲೆ ಏರ್ ಇಂಡಿಯಾ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
Advertisement
ತಮಿಳುನಾಡಿನ ತಿರುಚ್ಚಿ ನಗರದ ಮೇಲೆ ಈ ವಿಮಾನ ಗಿರಕಿಹೊಡೆದಿದ್ದು, ಜನರಲ್ಲಿ ಆತಂಕ ಮೂಡಿಸಿತ್ತು. ತಿರುಚಿರಾಪಳ್ಳಿಯಿಂದ ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು.
IX613 ವಿಮಾನ 141 ಪ್ರಯಾಣಿಕರೊಂದಿಗೆ ಸಂಜೆ 5:45 ಕ್ಕೆ ತಿರುಚ್ಚಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ತಾಂತ್ರಿಕ ದೋಷ ಕಂಡು ಬಂದ ಕೂಡಲೇ ಎಮರ್ಜೆನ್ಸಿ ಘೋಷಿಸಿದ ಏರ್ ಇಂಡಿಯಾ ವಿಮಾನದ ಪೈಲಟ್ 3 ಗಂಟೆಗಳ ಕಾಲ ಆಗಸದಲ್ಲೇ ಗಿರಕಿ ಹೊಡೆದು ನಂತರ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸೇಫ್ ಲ್ಯಾಂಡಿಂಗ್ ಮಾಡಿದ್ದಾರೆ.