ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಇಂದು (ಸೆಪ್ಟೆಂಬರ್ 29)ರಿಂದ ಮುಂದಿನ ಆರು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿಯುವ ನಿರೀಕ್ಷೆಯಿದೆ.
Advertisement
ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತದ ಸಾಧ್ಯತೆಯಿದೆ. ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದ ಗಾಳಿ ಮತ್ತು ಮಳೆ ಮುಂದುವರಿಯಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಈ ಭಾಗದಲ್ಲಿ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ವರುಣನ ಆರ್ಭಟ ಕೊಂಚ ಕಡಿಮೆಯಾಗಲಿದ್ದು, ಚದುರಿದ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡ ಕವಿದ ಹವಾಮಾನ ಮುಂದುವರಿಯಲಿದೆ.