ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಕಳೆದ ಕೆಲವು ದಿನಗಳಿಂದ ಹದಗೆಟ್ಟಿದ್ದ ವಾಯು ಗುಣಮಟ್ಟದಲ್ಲಿ ಇಂದು ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದೆ.
ಇದರಿಂದ ಜನರು ತಾತ್ಕಾಲಿಕ ನಿಟ್ಟುಸಿರು ಬಿಡುವಂತಾಗಿದ್ದರೂ, ಗಾಳಿಯ ಗುಣಮಟ್ಟ ಇನ್ನೂ ಸಂಪೂರ್ಣವಾಗಿ ಸುರಕ್ಷಿತ ಮಟ್ಟಕ್ಕೆ ಬಂದಿಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಇಂದು 124ಕ್ಕೆ ತಲುಪಿದೆ. ಕಳೆದ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸ್ವಲ್ಪ ಇಳಿಕೆಯಾಗಿದ್ದರೂ, World Health Organization ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ಇನ್ನೂ ಮಂಗಳೂರು, ಉಡುಪಿ ಸೇರಿದಂತೆ ಹಲವೆಡೆ ಗಾಳಿಯ ಗುಣಮಟ್ಟದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದೆ.
ರಾಜ್ಯದ ಇತರ ನಗರಗಳ ಇಂದಿನ AQI ಹೀಗಿದೆ:
ಮೈಸೂರು –119, ಬೆಳಗಾವಿ –74, ಕಲಬುರ್ಗಿ –99, ಶಿವಮೊಗ್ಗ –104, ಬಳ್ಳಾರಿ –123, ಹುಬ್ಬಳ್ಳಿ –80, ವಿಜಯಪುರ –111.
ತಜ್ಞರ ಪ್ರಕಾರ AQI 0-50 ಮಟ್ಟವನ್ನು ಉತ್ತಮ, 50-100 ಮಧ್ಯಮ, 100-150 ಕಳಪೆ, 150-200 ಅನಾರೋಗ್ಯಕರ, 200-300 ಗಂಭೀರ ಹಾಗೂ 300 ಕ್ಕಿಂತ ಹೆಚ್ಚು ಅಪಾಯಕಾರಿ ಎಂದು ವರ್ಗೀಕರಿಸಲಾಗಿದೆ.
ಒಟ್ಟಿನಲ್ಲಿ, ಕೆಲ ನಗರಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದರೂ, ಜನರು ಇನ್ನೂ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಲಾಗಿದೆ.



