HomeKarnataka Newsಏರ್ ಶೋಗೆ ದಿನಗಣನೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಬಂದ್!

ಏರ್ ಶೋಗೆ ದಿನಗಣನೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಬಂದ್!

For Dai;y Updates Join Our whatsapp Group

Spread the love

ಬೆಂಗಳೂರು:-2025ನೇ ಸಾಲಿನ ಏರ್ ಶೋಗೆ ಕೌಂಟ್ ಡೌನ್ ಶುರುವಾಗಿದೆ. ಫೆಬ್ರವರಿ 10 ರಿಂದ 14 ರವರಗೆ ಯಲಹಂಕದಲ್ಲಿ ಏರ್ ಶೋ ನಡೆಯಲಿರುವ ಕಾರಣ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ವಿಮಾನಗಳ ಕಾರ್ಯಾಚರಣೆ ಮೇಲೆಯೂ ಪರಿಣಾಮವಾಗಲಿದೆ.

ಏರ್ ಶೋ ವೇಳೆ‌‌‌ ನಿಗದಿತ ಸಮಯದಲ್ಲಿ ವಿಮಾನಗಳ‌ ಹಾರಾಟ ಬಂದ್ ಆಗಲಿದೆ. ಲ್ಯಾಂಡಿಂಗ್ ಹಾಗೂ ಟೇಕಾಫ್​ಗಳು ಇರುವುದಿಲ್ಲ. ಹೀಗಾಗಿ ಏರ್​​ಲೈನ್ಸ್ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಬರುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಪ್ರತಿ ವರ್ಷ ನಡೆಯುವ ಏರ್‌ ಶೋನಿಂದಾಗಿ ಬೆಂಗಳೂರು ಹಾಗೂ ವಾಯುಸೇನೆಗೆ ಕೋಟ್ಯಾಂತರ ರೂಪಾಯಿ ಆದಾಯ ಬರುತ್ತದೆ. ಯಲಹಂಕದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಸಾವಿರಾರು ಜನ ದೇಶ – ವಿದೇಶಗಳಿಂದ ಆಗಮಿಸುತ್ತಾರೆ. ಅಲ್ಲದೆ ವಿಮಾನಯಾನ ಕ್ಷೇತ್ರದಲ್ಲಿ ಕೋಟ್ಯಾಂತರ ರೂಪಾಯಿ ಹೂಡಿಕೆ ಆಗುತ್ತದೆ. ಹೊಸ ತಂತ್ರಜ್ಞಾನದ ಪರಿಚಯ ಹಾಗೂ ತಂತ್ರಜ್ಞಾನದ ವಿನಿಮಯವಾಗುತ್ತೆ, ಇದೆಲ್ಲ ಒಂದೆಡೆಯಾದರೆ ಏರ್ ಶೋ ನಿಂದಾಗಿ ವಿಮಾನ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ.

ಇನ್ನೂ ಏರ್ ಶೋ ವೇಳೆ ವಾಯುಪಡೆ ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಕೆಂಪೇಗೌಡ ಏರ್​​ಪೋರ್ಟ್​​ನಿಂದ ಟೇಕಾಫ್ ಮತ್ತು ಲ್ಯಾಂಡಿಂಗ್ ಸ್ಥಗಿತಗೊಳಿಸಲಾಗುತ್ತದೆ. ಪೆಬ್ರವರಿ 5 ರಿಂದ 8 ರವರೆಗೆ ಬೆಳಗ್ಗೆ 9 ಗಂಟೆಯಿಂದ 12 ಮತ್ತು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೂ ವಿಮಾನಗಳ ಹಾರಾಟಕ್ಕೆ ನಿರ್ಬಂಧವಿದೆ. ಪೆಬ್ರವರಿ 09 ರಂದು ಬೆಳಗ್ಗೆ 9 ರಿಂದ 12 ಗಂಟೆವರೆಗೂ ವಿಮಾನಗಳ ಹಾರಾಟ ಸ್ಥಬ್ದವಾಗಲಿದೆ.

ಪೆಬ್ರವರಿ 10 ರಂದು ಬೆಳಗ್ಗೆ 9 ಗಂಟೆಯಿಂದ 12 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆ ವರೆಗೂ ವಿಮಾನ ಕಾರ್ಯಾಚರಣೆ ಇರುವುದಿಲ್ಲ. ಫೆಬ್ರವರಿ 11 ಮತ್ತು 12 ರಂದು 12 ಗಂಟೆಯಿಂದ 3 ಗಂಟೆವರೆಗೂ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಲಾಗಿದೆ.

ಪೆಬ್ರವರಿ 13 ಮತ್ತು 14 ರಂದು ಬೆಳಗ್ಗೆ 9 ರಿಂದ 12 ಗಂಟೆ ಮತ್ತು ಮದ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆ ಇರುವುದಿಲ್ಲ.

ಏಷ್ಯಾದ ಅತಿ ದೊಡ್ಡ ಏರ್ ಶೋ ಯಲಹಂಕದ ವಾಯನೆಲೆಯಲ್ಲಿ ಫೆಬ್ರವರಿ 10 ರಿಂದ 14 ರವರಗೆ ನಡೆಯಲಿದ್ದು, ದೇಶ ವಿದೇಶಗಳ ಅನೇಕ ಗಣ್ಯರು, ಉದ್ಯಮಿಗಳು, ವಾಯುಪಡೆಗಳ ಸಿಬ್ಬಂದಿ ಆಗಮಿಸಲಿದ್ದಾರೆ. ಆಕರ್ಷಕ ಏರ್ ಶೋ ಕೂಡ ನಡೆಯಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!