ಬೆಂಗಳೂರು: ಚಿನ್ನ ವಂಚನೆ ಪ್ರಕರಣ ಸಂಬಂಧ ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯದ ನಿವಾಸ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದರು. ಇದೀಗ ಈ ಕೇಸ್ ಸಂಬಂಧ ಆರೋಪಿ ಐಶ್ವರ್ಯ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪರಿಶೀಲನೆ ವೇಳೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ವಹಿವಾಟು ಸೇರಿ ಇತರೆ ಮಾಹಿತಿಗಳನ್ನು ಕಲೆಹಾಕಿದ್ದು, ಇಬ್ಬರಿಂದಲೂ ವಿವರಣೆ ಪಡೆಯುತ್ತಿದ್ದಾರೆ. ಐಶ್ವರ್ಯಗೌಡ, ಕಾಂಗ್ರೆಸ್ ಮುಖಂಡ ತಿಬ್ಬೇಗೌಡ, ಮಾಜಿ ಸಚಿವ ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಡಿ ದಾಳಿ ನಡೆದಿದೆ. ಇಡಿ ಅಧಿಕಾರಿಗಳು ಐಶ್ವರ್ಯಗೌಡ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಐಶ್ವರ್ಯಾ ಗೌಡ ಅವರ ಮಂಡ್ಯದ ಕಿರುಗಾವಲು ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಪ್ಲಾಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು, ಐಶ್ವರ್ಯಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.