ಮುಂಬೈನಲ್ಲಿ ಬಾಲಿವುಡ್ ಬ್ಯೂಟಿ ಐಶ್ವರ್ಯ ರೈ ಅವರ ಕಾರಿಗೆ ಬಸ್ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ.
ಇನ್ನೂ ಅಪಘಾತದ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಇದರಿಂದ ಅಭಿಮಾನಿಗಳು ಆತಂಕ ವ್ಯಕ್ತಪಡಿಸ್ತಿದ್ದರು. ಇದೀಗ ಅಭಿಮಾನಿಗಳು ನಿಟ್ಟುಸಿರುವ ಬಿಡುವಂತಹ ಸುದ್ದಿಯನ್ನು ಅಲ್ಲಿನ ಸ್ಥಳೀಯರು ಹಾಗೂ ಪೊಲೀಸರು ನೀಡಿದ್ದಾರೆ.
ನಟಿ ಕಾರು ಅಪಘಾತಕ್ಕೆ ಒಳಗಾಗಿದ್ದು, ನಿಜ. ಆದರೆ ಕಾರಿನಲ್ಲಿ ಐಶ್ವರ್ಯ ರೈ ಇರಲಿಲ್ಲ. ಪರಿಶೀಲನೆ ನಡೆಸಿದಾಗ ಐಶ್ವರ್ಯ ರೈ ಅವರ ಕಾರು ಅನ್ನೋದು ಮಾತ್ರ ದೃಢವಾಗಿದೆ. ಆದರೆ ಅವರು ಪ್ರಯಾಣಿಸುತ್ತಿರಲಿಲ್ಲ ಎಂದು ಮುಂಬೈ ಪೊಲೀಸರು ಮಾಹಿತಿ ಕೊಟ್ಟಿದ್ದಾರೆ.
ಅಪಘಾತ ದೃಶ್ಯದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಐಶ್ವರ್ಯಾ ರೈ ಅವರು ಬಾಲಿವುಡ್ನಲ್ಲಿ ಬೇಡಿಕೆ ಹೊಂದಿದ್ದಾರೆ. ಇತ್ತೀಚೆಗೆ ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅವರು ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಈ ಕಾರಣಕ್ಕೆ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಕೂಡ ಕಡಿಮೆಯೇ. ಹೀಗಿರುವಾಗಲೇ ಐಶ್ವರ್ಯಾ ಕಾರು ಅಪಘಾತ ಆಗಿದೆ ಎಂದಾಗ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿತ್ತು. ಆದರೆ, ಅವರು ಕಾರಿನಲ್ಲಿ ಇಲ್ಲ ಎನ್ನುವ ವಿಚಾರ ಅವರ ಅಭಿಮಾನಿಗಳನ್ನು ನಿಟ್ಟುಸಿರು ಬಿಡುವಂತೆ ಮಾಡಿದೆ.