ಕರ್ನಾಟಕದ ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ವಿಸಿಟ್ ಕೊಟ್ಟ ಅಜಿಂಕ್ಯ ರಹಾನೆ

0
Spread the love

ದಕ್ಷಿಣ ಕನ್ನಡ: ಕರ್ನಾಟಕದ ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ಕ್ರಿಕೆಟಿಗ ಅಜಿಂಕ್ಯ ರಹಾನೆ ಭೇಟಿ ಕೊಟ್ಟಿದ್ದಾರೆ ಜಿಲ್ಲೆಯ ಮುಲ್ಕಿಯಲ್ಲಿರುವ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿದರು. ಈ ವೇಳೆ ಅರ್ಚಕ ಗೋಪಾಲಕೃಷ್ಣ ಭಟ್ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.

Advertisement

ಮಂಗಳೂರಿನ ಕರಾವಳಿ ಮೈದಾನದಲ್ಲಿ ಆಯೋಜಿಸಲಾಗಿದ್ದ 10ನೇ ವರ್ಷದ ಪಿಲಿನಲಿಕೆ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಅಜಿಂಕ್ಯ ರಹಾನೆ ಆಗಮಿಸಿದ್ದರು. ಈ ವೇಳೆ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ ಜೊತೆ ಕಾರ್ಯದರ್ಶಿ ಡಾ. ಪಿ ವಿ ಶೆಟ್ಟಿ ಬಪ್ಪನಾಡು ಕ್ಷೇತ್ರಕ್ಕೆ ಬರಮಾಡಿಕೊಂಡರು.

ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಕಾರ್ಯನಿರ್ವಣಾಧಿಕಾರಿ ಶ್ವೇತಾ ಪಳ್ಳಿ, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್ ಮುಲ್ಕಿ ಸೇರಿ ಮತ್ತಿತರರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here