ವಿಜಯಸಾಕ್ಷಿ ಸುದ್ದಿ, ಗದಗ
Advertisement
ಕಳೆದ ಹಲವು ತಿಂಗಳಿನಿಂದ ಖಾಲಿ ಇದ್ದ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಅಕ್ಬರಸಾಬ ಬಬರ್ಚಿ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಸರಳ, ಸಜ್ಜನಿಕೆಯ ಅಕ್ಬರಸಾಬ ಬಬರ್ಚಿ ಅವರ ನೇಮಕಕ್ಕೆ ಹಲವಾರು ಮುಖಂಡರು ಸ್ವಾಗತಿಸಿ, ಅಭಿನಂದಿಸಿದ್ದಾರೆ.
ಸರಕಾರದ ಅಧೀನ ಕಾರ್ಯದರ್ಶಿ ( ಅಭಿವೃದ್ಧಿ ಪ್ರಾಧಿಕಾರ ಮತ್ತು ನಯೋಸೇ) ಲತಾ.ಕೆ ಅವರು ಗುರುವಾರ ಸಂಜೆ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವೂ ಸೇರಿದಂತೆ ಹಾವೇರಿ, ಹೊಸಪೇಟೆ, ಯಾದಗಿರಿ, ವಿಜಯಪುರ ಹಾಗೂ ಹಂಪಿ ವಿಶ್ವಪರಂಪರೆ ಪ್ರದೇಶ ಯೋಜನಾ ಪ್ರಾಧಿಕಾರಕ್ಕೂ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.