ಬೆಂಗಳೂರು: ಜಾರ್ಖಂಡ್ ಮೂಲದ ನಕ್ಸಲೇಟ್ ಅನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ವಾಸ ಇದ್ದ ಶಾಮಾ ಪರ್ವೀನ್ (30) ಬಂಧಿತ ನಕ್ಸಲೇಟ್ ಆಗಿದ್ದು, ಈಕೆ ದೇಶ ವಿರೋಧಿ ಕೃತ್ಯಗಳನ್ನು ಮಾಡುವ ಮೂಲಕ ಜಿಹಾದಿ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಳು ಎಂಬ ಆರೋಪವಿದೆ.
Advertisement
ಗುಜರಾತ್ ಎಟಿಎಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಈ ಹಿಂದೆ ಬಂಧಿಸಲಾದ ನಾಲ್ವರು ಭಯೋತ್ಪಾದಕರೊಂದಿಗೆ ಸಮಾ ಪರ್ವೀನ್ ಸಂಪರ್ಕದಲ್ಲಿದ್ದಳು. ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ,
ಇನ್‌ಸ್ಟಾಗ್ರಾಂ ಗುಂಪಿನಲ್ಲಿ ಸಕ್ರಿಯಳಾಗಿದ್ದಳು ಮತ್ತು ದೇಶ ವಿರೋಧಿ ವೀಡಿಯೊಗಳನ್ನು ಅಪ್‌ಲೋಡ್ ಮಾಡುವ ಮೂಲಕ ಯುವಕರನ್ನು ಜಿಹಾದಿ ಕೃತ್ಯಗಳಿಗೆ ಪ್ರಚೋದಿಸುತ್ತಿದ್ದಳು ಎಂದು ತಿಳಿದು ಬಂದಿದೆ. ಸದ್ಯ 8ನೇ ಎಸಿಎಂಎಂ ಕೋರ್ಟ್ ನಲ್ಲಿ ಟ್ರಾನ್ಸಿಸ್ಟ್ ವಾರೇಂಟ್ ಪಡೆದು ಗುಜರಾತ್ ATC ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ.