ಕಲಬುರ್ಗಿ:- ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ ಎಂಬುವುದೆಲ್ಲಾ ಊಹಾಪೋಹ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಕ್ರಾಂತಿಯಾಗುತ್ತದೆ ಎಂಬುದೆಲ್ಲ ಬರಿ ಊಹಾಪೋಹ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಕಾರಣಕ್ಕೂ ಬದಲಾವಣೆಯಾಗುವುದಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ರಾಜ್ಯದ ಅಭಿವೃದ್ಧಿಗೆ ಬುನಾದಿ ಹಾಕಿಕೊಟ್ಟಿದ್ದರು. ಸಿದ್ದರಾಮಯ್ಯ ಅವರು ಆ ಬುನಾದಿಯ ಮೇಲೆ ಸುಭದ್ರವಾದ ಮನೆಯನ್ನು ಕಟ್ಟಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲ ವರ್ಗದವರಿಗೂ ಸಮಾನತೆ ತಂದಿರುವ ಅವರು, ಪೂರ್ಣ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಇರಲಿದ್ದಾರೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.



