ಯಾದಗಿರಿ:- ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೌದು ಅಕ್ರಮ ಆಸ್ತಿಗಳಿಗೆ ಆರೋಪದಡಿ ಯಾದಗಿರಿ ಡಿಹೆಚ್ಒ ರನ್ನು ಸಸ್ಪೆಂಡ್ ಮಾಡಲಾಗಿದೆ. ಡಾ.ಪ್ರಭುಲಿಂಗ್ ಮಾನಕರ್ ಸಸ್ಪೆಂಡ್ ಆದ ಅಧಿಕಾರಿಯಾಗಿದ್ದು,.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣ ಬಾಕಿ ಇರಿಸಿ ಅಮಾನತು ಜೊತೆಗೆ ವರ್ಗಾವಣೆ ಮಾಡಲಾಗಿದೆ ಡಿಎಚ್ಒ ಯಿಂದ ನೇರವಾಗಿ ಕಲಬುರಗಿ ತಾಲೂಕಿನ ಆಳಂದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ದೂರು ಹಿನ್ನೆಲೆ ಕಳೆದ ಕೆಲ ತಿಂಗಳ ಹಿಂದೆ DHO ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಯಾದಗಿರಿಯ ಕಚೇರಿ, ಮನೆ, ಕಲಬುರಗಿ ಮನೆ ಮೇಲೆ ದಾಳಿ ನಡೆದಿತ್ತು. ಸದ್ಯ ಇದೀಗ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.