ಬೆಂಗಳೂರು: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರನ್ನು ಅರೆಸ್ಟ್ ಮಾಡಲಾಗಿದೆ. ಆಂಧ್ರದ ಚಿತ್ತೂರಿಗೆ ಹೊರಟಿದ್ದ ಮಾಜಿ ಸಚಿವ ಮುನಿರತ್ನರನ್ನ ಮುಳಬಾಗಿಲು ತಾಲೂಕಿನ ಹೊರವಲಯದ ನಂಗಲಿ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇನ್ನೂ ಈ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.
ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು. ಈ ವೇಳೆ ಪೊಲೀಸರು ಒಂದು ವಾರ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದ್ರೆ ವಿಚಾರಣೆ ನಡೆಸಿದ ಬಳಿಕ, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು. ಶಾಸರನ್ನು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದ ವೇಳೆ ಬೆಂಬಲಿಗರೂ ಅಲ್ಲಿ ಜಮಾಯಿಸಿದ್ದರು. ಬಂಧನ ಖಂಡಿಸಿ ಸ್ಥಳದಲ್ಲೇ ಧಿಕ್ಕಾರ ಕೂಗಿದರು.



