HomePolitics Newsಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಎಫ್‌ಐಆರ್!

ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಎಫ್‌ಐಆರ್!

ಮೈಸೂರು: ಟಿ.ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸೆ.18ರಂದು ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಕೆಲವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.

ಟಿ.ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಅವರು ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗಳ ಬಳಿಕ ವಿವಾದ ತೀವ್ರಗೊಂಡಿತ್ತು. ಇದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಶೋಭಾಯಾತ್ರೆ ನಡೆಸಲಾಗಿದ್ದು, ಈ ವೇಳೆ ಪ್ರತಾಪ್ ಸಿಂಹ ಅವರು ಇನ್ಸ್‌ಪೆಕ್ಟರ್ ವಿರುದ್ಧ ಆಕ್ಷೇಪಾರ್ಹ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಗುಂಪುಗಳು ಹಾಗೂ ಸಮುದಾಯಗಳ ನಡುವೆ ದ್ವೇಷಕ್ಕೆ ಉತ್ತೇಜನ ನೀಡುವುದು, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವಂತಹ ಕೃತ್ಯಗಳ ಆರೋಪದಡಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಬಿಎನ್‌ಎಸ್‌ನ 132, 191, 194, 196(1)(ಎ)(ಬಿ), 299, 353(1)(ಬಿ)(ಸಿ) ಹಾಗೂ 190ನೇ ಸೆಕ್ಷನ್‌ಗಳನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣದಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಇತರರ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img