ಮಡಿಕೇರಿ: ಕೇರಳದ ಜನರು ಹಾಗೂ ಮಲಯಾಳಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ಸಲ್ಲಿಕೆಯಾಗಿದೆ.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರತಾಪ್ ಸಿಂಹ ಅವರು ಮಲಯಾಳಿ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂತಹ ನಿಂದನಾತ್ಮಕ ಹಾಗೂ ದ್ವೇಷ ಭಾವನೆ ಮೂಡಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನ ಗೋಣಿಕೊಪ್ಪದ ಕೊಡಗು ಹಿಂದೂ ಮಲಯಾಳಿ ಸಮಾಜದ ಮುಖಂಡರು ದೂರು ಸಲ್ಲಿಸಿದ್ದಾರೆ.
ಮಲಯಾಳಿ ಸಮುದಾಯದ ಗೌರವ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಾಜದ ಮುಖಂಡರು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಈ ಮೂಲಕ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.







