ಬೀದರ್: ಸಚಿವ ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾಗೆ ಭಾಲ್ಕಿ ನಗರ ಠಾಣಾ ಪೊಲೀಸರು ಎರಡು ನೋಟಿಸ್ ಜಾರಿ ಮಾಡಿದ್ದಾರೆ. ಪೊಲೀಸರು ಮೊದಲಿಗೆ ಫೆಬ್ರವರಿ 25ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ನಂತರ ಮತ್ತೊಮ್ಮೆ ಹೊಸ ನೋಟಿಸ್ ಜಾರಿ ಮಾಡಿ ಫೆಬ್ರವರಿ 21ರಂದು ಠಾಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಸೂಚಿಸಿದ್ದಾರೆ.
ವಿಚಾರಣೆಗೆ ಹಾಜರಾಗದಿದ್ದರೆ ಬಂಧನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಭಾರತೀಯ ನಾಗರಿಕ ಸಂಹಿತೆ 2023ರ ಸಂಬಂಧಿತ ಕಲಂ ಅಡಿಯಲ್ಲಿ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ಏನಿದು ಪ್ರಕರಣ?
ಪೊಲೀಸ್ ಇಲಾಖೆ, ಜಿಲ್ಲಾಡಳಿತ ಮುಂದಿಟ್ಟುಕೊಂಡು ಕಾಂಗ್ರೆಸ್ ಕಾರ್ಯಕ್ರಮ ಮಾಡ್ಕೊಳ್ತಿದ್ದಿ, ನೀನು ಹಿಜಡಾ ಇದ್ದೀಯಾ ಎಂದೆಲ್ಲಾ ಏಕವಚನದಲ್ಲೇ ಈಶ್ವರ್ ಖಂಡ್ರೆರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಇದೇ ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಬಿರಾದರ್ ಎಂಬುವವರು ಭಾಲ್ಕಿ ನಗರ ಠಾಣೆಯಲ್ಲಿ ಎಫ್ಆರ್ ದಾಖಲಾಗಿತ್ತು.



