HomeCrime Newsಜೈಶ್-ಎ-ಮೊಹಮ್ಮದ್ ಸಂಪರ್ಕ ಆರೋಪ: ಗುಜರಾತ್ ಎಟಿಎಸ್ ಭರ್ಜರಿ ಕಾರ್ಯಾಚರಣೆ, ಎಂಟು ಮಂದಿ ಬಂಧನ

ಜೈಶ್-ಎ-ಮೊಹಮ್ಮದ್ ಸಂಪರ್ಕ ಆರೋಪ: ಗುಜರಾತ್ ಎಟಿಎಸ್ ಭರ್ಜರಿ ಕಾರ್ಯಾಚರಣೆ, ಎಂಟು ಮಂದಿ ಬಂಧನ

For Dai;y Updates Join Our whatsapp Group

ಗಾಂಧೀನಗರ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್‌ಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಹಲವು ರಾಜ್ಯಗಳಲ್ಲಿ ನಡೆಸಿದ ಸಮನ್ವಯ ಕಾರ್ಯಾಚರಣೆಯಲ್ಲಿ ಎಂಟು ಮಂದಿಯನ್ನು ಬಂಧಿಸಿದೆ.

ಗುಜರಾತ್‌ನ ಬನಸ್ಕಾಂತ, ಪಾಟಣ್, ನವಸಾರಿ ಹಾಗೂ ಮಧ್ಯಪ್ರದೇಶದ ದೇವಾಸ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರು ಗುಜರಾತ್‌ನಲ್ಲಿ ಉಗ್ರ ಚಟುವಟಿಕೆಗಳಿಗೆ ಸಂಚು ರೂಪಿಸುತ್ತಿದ್ದ ಜೈಶ್-ಎ-ಮೊಹಮ್ಮದ್ ಉಗ್ರರಿಗೆ ನೆರವು ನೀಡುತ್ತಿದ್ದರು ಎಂದು ಎಟಿಎಸ್ ಆರೋಪಿಸಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತರಲ್ಲಿ ಕೆಲವರು ಪಾಟಣ್‌ನ ಜಾಮಿಯಾ ಅಬುಲ್ ಹಸನ್ ಮದರಸಾ ಹಾಗೂ ನವಸಾರಿಯ ಜಾಮಿಯಾ ರಹ್ಮಾನಿಯಾ ಖಂಬಿಯಾ ಸೇರಿದಂತೆ ಕೆಲವು ಧಾರ್ಮಿಕ ಮತ್ತು ಶೈಕ್ಷಣಿಕ ಸಂಸ್ಥೆಗಳ ಸಂಪರ್ಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಯುವಕರನ್ನು ಮೂಲಭೂತವಾದದತ್ತ ಸೆಳೆಯುವುದು ಹಾಗೂ ಉಗ್ರ ಚಟುವಟಿಕೆಗಳಿಗೆ ಅಗತ್ಯ ನೆರವು ಒದಗಿಸಲು ಈ ಸ್ಥಳಗಳನ್ನು ಬಳಸಲಾಗುತ್ತಿತ್ತು ಎಂದು ಭದ್ರತಾ ಸಂಸ್ಥೆಗಳು ಶಂಕಿಸಿವೆ.

ಈ ಸಂಬಂಧ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಎಂಟು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ), 1967ರ ಸೆಕ್ಷನ್ 13, 17, 18, 38 ಮತ್ತು 39ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗುವುದು, ಉಗ್ರರಿಗೆ ಹಣಕಾಸಿನ ನೆರವು ಒದಗಿಸುವುದು, ಸಂಚು ರೂಪಿಸುವುದು ಹಾಗೂ ನಿಷೇಧಿತ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪಗಳನ್ನು ಅವರು ಎದುರಿಸುತ್ತಿದ್ದಾರೆ.

ಇದರ ಜೊತೆಗೆ, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 148 ಮತ್ತು 61ರ ಅಡಿಯಲ್ಲಿಯೂ ಆರೋಪಗಳನ್ನು ದಾಖಲಿಸಲಾಗಿದೆ. ಪ್ರಕರಣದ ಕುರಿತು ಎಟಿಎಸ್ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img