HomeKarnataka Newsಕಲಬುರಗಿಯಲ್ಲಿ ಉಗ್ರ ಸಂಪರ್ಕದ ಆರೋಪ: ಮಮ್ತಾಜ್ ಮಲೀಕ್ ವಿರುದ್ಧ ಎಫ್‌ಐಆರ್ ದಾಖಲು

ಕಲಬುರಗಿಯಲ್ಲಿ ಉಗ್ರ ಸಂಪರ್ಕದ ಆರೋಪ: ಮಮ್ತಾಜ್ ಮಲೀಕ್ ವಿರುದ್ಧ ಎಫ್‌ಐಆರ್ ದಾಖಲು

For Dai;y Updates Join Our whatsapp Group

ಕಲಬುರಗಿ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಬಂಧಿತನಾಗಿರುವ ಮಮ್ತಾಜ್ ಮಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚೌಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುಶೀಲ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ ಮಲೀಕ್ ಕಲಬುರಗಿಯ ಸರಾಫ್ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ. ಆತನ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ ಹಲವು ಫೋಟೋಗಳು, ವಿಡಿಯೋಗಳು ಹಾಗೂ ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿದ ಮಾಹಿತಿಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ವಾಟ್ಸ್‌ಆ್ಯಪ್ ಗ್ರೂಪ್‌ಗಳ ಸಂಪರ್ಕದ ಬಗ್ಗೆ ತನಿಖೆ:

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮಮ್ತಾಜ್ ಮಲೀಕ್ ಇಮಾಮ್ ಮೇಂದಿ ಸೇರಿದಂತೆ ಉರ್ದು ಭಾಷೆಯ ವಾಟ್ಸ್‌ಆ್ಯಪ್ ಗ್ರೂಪ್‌ಗಳ ಸದಸ್ಯನಾಗಿದ್ದ ಎನ್ನಲಾಗಿದೆ. ಪಾಕಿಸ್ತಾನದ ಜೈನುಲ್ ಅಬ್ದಿನ್ ಎಂಬ ವ್ಯಕ್ತಿ ತನ್ನನ್ನು ವಾಟ್ಸ್‌ಆ್ಯಪ್ ಗ್ರೂಪ್‌ಗೆ ಸೇರಿಸಿದ್ದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ವರದಿಯಾಗಿದೆ. ಈ ವ್ಯಕ್ತಿ ಲಷ್ಕರ್-ಎ-ತೊಯ್ಬಾ ಸಂಘಟನೆಯ ಕಮಾಂಡರ್ ಆಗಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಸಾಮಾಜಿಕ ಜಾಲತಾಣಗಳ ಚಟುವಟಿಕೆಗಳ ಪರಿಶೀಲನೆ:

ಮಮ್ತಾಜ್ ಮಲೀಕ್ ಪಾಕಿಸ್ತಾನ ಪರ ಘೋಷಣೆಗಳನ್ನು ಹೊಂದಿರುವ ಹಾಗೂ ಕಾಶ್ಮೀರಕ್ಕೆ ಸಂಬಂಧಿಸಿದ ಕೆಲವು ಇನ್‌ಸ್ಟಾಗ್ರಾಂ ಖಾತೆಗಳನ್ನು ಫಾಲೋ ಮಾಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಪಾಕಿಸ್ತಾನಕ್ಕೆ ಸಂಬಂಧಿಸಿದ ವಿಡಿಯೋಗಳು ಮತ್ತು ರೀಲ್ಸ್‌ಗಳಿಗೆ ಲೈಕ್ ಮಾಡಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಪೊಲೀಸರು ಆತನ ಮೊಬೈಲ್‌ನಲ್ಲಿದ್ದ ಫೋಟೋ, ವಿಡಿಯೋ ಸೇರಿದಂತೆ ಹಲವು ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 113(3) ಮತ್ತು 197(1) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಗಳ ಸತ್ಯಾಸತ್ಯತೆ ಹಾಗೂ ಇತರ ಸಂಪರ್ಕಗಳ ಕುರಿತು ತನಿಖೆ ಮುಂದುವರಿದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img