ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಆರೋಪ: ಮುನಿರತ್ನ ಬೆಂಬಲಿಗರ ವಿರುದ್ಧ FIR

0
Spread the love

ಬೆಂಗಳೂರು: ಶಾಸಕ ಮುನಿರತ್ನ ವಿರುದದ್ಧ ಪ್ರಕರಣಗಳನ್ನ ಎಸ್ಐಟಿಯಿಂದ ತನಿಖೆ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬಾಡೀವಾರೆಂಟ್ ಮೇಲೆ ಮುನಿರತ್ನರನ್ನ ಪಡೆದು ತನಿಖೆ ನಡೆಸುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಮುನಿರತ್ನ ಬೆಂಬಲಿಗರು ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮುನಿರತ್ನ ಅವರ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ.

Advertisement

ನಿಮ್ಮ ವಂಶವೇ ಇರದಂತೆ ಮಾಡುತ್ತೇವೆಂದು ಸಾಕ್ಷಿಗಳ ಮನೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಮತ್ತು ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

LEAVE A REPLY

Please enter your comment!
Please enter your name here